Sunday, October 19, 2025
Homeರಾಜ್ಯಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಹರ್ಷ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಹರ್ಷ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

B.Y. Vijayendra expressed joy over High Court's permission for procession in Chittapur

ಬೆಂಗಳೂರು,ಅ.19-ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌‍ಎಸ್‌‍ ಪಥಸಂಚಲನಕ್ಕೆ ಕಲಬುರಗಿ ಸಂಚಾರಿ ಪೀಠ ಅನುಮತಿ ನೀಡಿರುವುದಕ್ಕೆ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್‌‍ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.

ಚಿತ್ತಾಪುರದಲ್ಲಿ ಆರ್‌ಎಸ್‌‍ಎಸ್‌‍ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ತಿರುಗೇಟು ನೀಡಿದ್ದಾರೆ.

ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್‌‍ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕಿಯಗೊಂಡಂತಾಗಿದೆ ಎಂದು ಹೇಳಿದ್ದಾರೆ.

RELATED ARTICLES

Latest News