ಬೆಂಗಳೂರು,ಅ.20- ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ನ 3ನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸುಮಾರು 30 ರಿಂದ 35 ವರ್ಷದಂತೆ ಕಾಣುವ ಈ ಯುವಕನ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ.ಇಂದು ಬೆಳಗ್ಗೆ ಮಾಲ್ ತೆರೆಯುತ್ತಿದ್ದಂತೆ 10.15 ರ ಸುಮಾರಿನಲ್ಲಿ
ಈ ಯುವಕ ಜಿಟಿ ಮಾಲ್ ಪ್ರವೇಶಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈತ 3ನೇ ಮಹಡಿಗೆ ಹೋಗಿದ್ದಾಗ ಅಲ್ಲಿಂದ ಬಿದ್ದು ಮೃತಪಟ್ಟಿದ್ದಾನೆ.
ಇದು ಆಕಸಿಕವಾಗಿ ಆಯತಪ್ಪಿ ಬಿದ್ದಿರುವುದೋ ಅಥವಾ ಆತಹತ್ಯೆಯೋ ಎಂಬುವುದು ನಿಗೂಢವಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ಮಾಲ್‌ನ ಸಿಸಿ ಕ್ಯಾಮೆರಾಗಳನ್ನು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಮಾಲ್‌ಗೆ ಸಾರ್ವಜನಿಕ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಯುವಕನ ಮೈ ಮೇಲೆ ನೈಟ್ ಡ್ರಸ್ ಇದ್ದು, ಆತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.