ಬೆಂಗಳೂರು, ಆ.21- ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತ ಸಹಜೀವನ ನಡೆಸುತ್ತಿದ್ದ ಯುವಕ ಮತ್ತು ಯುವತಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಒಡಿಶಾ ಮೂಲದ ರಾಕೇಶ್ ಪಾತ್ರ (23), ಸೀಮಾ ನಾಯಕ್ (21) ಎಂದು ಗುರುತಿಸಲಾಗಿದೆ.
ಕಂಪೆನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಇವರು ಕಳೆದ ಹತ್ತು ದಿನಗಳ ಹಿಂದೆ ಕಲ್ಲುಬಾಳು ಪ್ರದೇಶದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು.ಇವರ ಮನೆ ಸಮೀಪವೇ ಅವರ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ನೆಲೆಸಿದ್ದಾರೆ. ತಮ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವವರು ಇಲ್ಲಿಗೆ ಬಂದು ವಾಸವಾಗಿದ್ದಾರೆ ಎಂಬುದನ್ನು ತಿಳಿದಿದ್ದರು.
ಪ್ರತಿದಿನ ರಾಕೇಶ್ ಮತ್ತು ಸೀಮಾ ಜಗಳವಾಡುತ್ತಿದ್ದರು. ಆದರೆ, ನಿನ್ನೆ ಮನೆಯಿಂದ ಯಾವುದೇ ಸದ್ದು ಬರದಿದ್ದಾಗ ಅನುಮಾನಗೊಂಡು ಇಂದು ಮುಂಜಾನೆ ರಾಕೇಶ್‌ಗೆ ಕರೆ ಮಾಡಲಾಗಿದೆ. ಕರೆ ಸ್ವೀಕರಿಸದಿದ್ದಾಗ ಮನೆಯ ಕಿಟಕಿ ತೆಗೆದು ನೋಡಿದಾಗ ಇಬ್ಬರೂ ನೇಣು ಹಾಕಿಕೊಂಡಿರುವುದು ಗೊತ್ತಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶೀಟ್ ಮನೆಯ ಛಾವಣಿಯಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಕಂಬಿಗೆ ಮೊದಲು ರಾಕೇಶ್ ದುಪ್ಪಟದಿಂದ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ನೋಡಿದ ಸೀಮಾ ಆತಂಕಗೊಂಡು ನೇಣು ಹಾಕಿಕೊಂಡಿದ್ದ ವೇಲ್ ಅನ್ನು ಕತ್ತರಿಸಿ ಕೆಳಗಿಳಿಸಿ ನೋಡಿದಾಗ ರಾಕೇಶ್ ಸಾವನ್ನಪ್ಪಿರುವುದು ಗೊತ್ತಾಗಿದೆ.
ಇದರಿಂದ ಗಾಬರಿಗೊಂಡ ಆಕೆ ಅದೇ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾಳೆ ಎಂಬುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಇಬ್ಬರ ಆತಹತ್ಯೆಗೆ ನಿಖರ ಕಾರಣ ಸಧ್ಯಕ್ಕೆ ತಿಳಿದು ಬಂದಿಲ್ಲ. ಕಳೆದ ಆರು ತಿಂಗಳಿನಿಂದ ಇವರು ಸಹಜೀವನ ನಡೆಸುತ್ತಿದ್ದರು ಎಂದು ಗೊತ್ತಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಇವರ ಸಂಬಂಧಿಕರಿಗೆ ಮಾಹಿತಿ ರವಾನಿಸಲಾಗಿದ್ದು, ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.