Thursday, October 23, 2025
Homeರಾಜ್ಯರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌​

ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌​

Rains to continue in the state for another 5 days, orange alert for many districts​

ಬೆಂಗಳೂರು, ಅ.23- ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿಯ ಪರಿಣಾಮದಿಂದ ಹಿಂಗಾರು ಮಳೆ ಚೇತರಿಕೆ ಕಂಡಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ನಿನ್ನೆ ಬೆಳಿಗ್ಗೆ ಹಾಗೂ ಸಂಜೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಿತ್ತು. ಬಲಿಪಾಡ್ಯಮಿ ಹಬ್ಬದ ಸಂಭ್ರದಲ್ಲಿದ್ದವರಿಗೂ ಮಳೆಯಿಂದ ತೊಂದರೆ ಉಂಟಾಯಿತು.

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌​ ಘೋಷಿಸಿದೆ. ಹಾಗೆಯೇ ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌​ ಘೋಷಿಸಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಅಂದರೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

RELATED ARTICLES

Latest News