ದೊಡ್ಡಬಳ್ಳಾಪುರ, ಅ.28- ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್ಕುಮಾರ್ (22), ರವಿಕುಮಾರ್ (24) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಬ್ಬ ವ್ಯಕ್ತಿ ಗಜೇಂದ್ರ ಯಾದವ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
