ಬೆಂಗಳೂರು,ಅ.28- ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಬಹುನಿರಿಕ್ಷೀತ ಟನಲ್ ರೋಡ್ ನಿರ್ಮಾಣ ಮಾಡುವ ಬದಲು ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಸುರಂಗ ರಸ್ತೆ ಮಾಡುತ್ತೀನಿ, ಸ್ಕೈಡೆಕ್ ಮಾಡ್ತೀನಿ, ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ, ಜಿಬಿಎ ಮಾಡ್ತೀನಿ ಎಂದು ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ ಸಾಧನೆ ಎಂದು ವಾಗ್ದಳಿ ನಡೆಸಿದ್ದಾರೆ.
ನಿಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು ಕಳೆದ 4 ತಿಂಗಳಿಂದ ಸಂಬಳವಿಲ್ಲದೆ ಸಂಸಾರ ತೂಗಿಸಲು ಪರದಾಡುತ್ತಿದ್ದಾರೆ. ಮೊದಲು ಅವರಿಗೆ ಬಾಕಿ ವೇತನ ಬಿಡುಗಡೆ ಮಾಡಿ ಶಿಕ್ಷರರ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದ್ದಾರೆ.
