ಬೆಂಗಳೂರು,ಅ.30-ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಪಥಸಂಚನದಲ್ಲಿ ಭಾಗಿಯಾಗಿದ್ದರು ಎಂಬ ಒಂದೇ ಕಾರಣಕ್ಕಾಗಿ ಸೇವೆಯಿಂದ ಅಮಾನತುಗೊಂಡಿದ್ದ ರಾಯಚೂರು ಜಿಲ್ಲೆ ಪಿಡಿಒ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧೀಕರಣ (ಕೆಎಟಿ) ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಮನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಪಿಡಿಒ ಪ್ರವೀಣ್ ಕುಮಾರ್ ಅವರು, ಕೆಎಟಿ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಕೆಇಟಿ ಸರಕಾರದ ಆದೇಶಕ್ಕೆ ಮಧ್ಯಂತರ ನೀಡಿದೆ.ಕಳೆದ ಅಕ್ಟೋಬರ್ 17 ರಂದು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಕೆ.ಪಿ. ಅವರನ್ನು ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು.
2025ರ ಅಕ್ಟೋಬರ್ 12 ಂದು ಲಿಂಗಸುಗೂರು ಪಟ್ಟಣದಲ್ಲಿ ಏರ್ಪಡಿಸಿದ್ದ ಆರ್ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಮವಸ ಧರಿಸಿ, ಕೈಯಲ್ಲಿ ದೊಣ್ಣೆ ಹಿಡಿದು ಗಣವೇಷಧಾರಿಗಳ ಪಥಸಂಚಲನದಲ್ಲಿ ಭಾಗವಹಿಸಿರುವ ಬಗ್ಗೆ ವರದಿಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಈ ಬಗ್ಗೆ ರಾಯಚೂರು ಜಿಲ್ಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಕುಮಾರ್ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ಸಮವಸ ಧರಿಸಿ ಕೈಯಲ್ಲಿ ದೊಣ್ಣೆ ಹಿಡಿದು ಆರ್ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿರುವುದು ಖಚಿತಪಡಿಸಿದ್ದು, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನು ಎಲ್ಲಾ ಕಾಲದಲ್ಲಿಯೂ ಸಂಪೂರ್ಣ ನೀತಿ ನಿಷ್ಠೆ ಹೊಂದಿರಬೇಕು. ಮತ್ತು ಕರ್ತವ್ಯ ಶ್ರದ್ಧೆಯನ್ನು ಹೊಂದಿರಬೇಕು ಹಾಗೂ ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡಬಾರದೆಂಬ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿತ್ತು.
ಪ್ರತಿಯೊಬ್ಬ ಸರ್ಕಾರಿ ನೌಕರನೂ ಉನ್ನತ ನೈತಿಕ ಆದರ್ಶಗಳನ್ನು ಹೊಂದಿರಬೇಕು, ರಾಜಕೀಯವಾಗಿ ತಟಸ್ಥನಾಗಿರಬೇಕು ಹಾಗೂ ತನ್ನ ಕರ್ತವ್ಯ ನಿರ್ವಹಣೆಯ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರೆ ಆಮಿಷಗಳಿಗೆ ಒಳಗಾಗಬಾರದೆಂಬ ನಿಯಮಗಳನ್ನು ನೌಕರರು ಉಲ್ಲಂಸಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ್ ಕುಮಾರ್ ವಿರುದ್ಧ ಶಿಸ್ತು ಕ್ರಮ ವಹಿಸಲು ಶಿಾರಸು ಮಾಡಲಾಗಿತ್ತು. ಅದರ ಅನ್ವಯ ಪ್ರವೀಣ್ ಕುಮಾರ್ ವಿರುದ್ಧದ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ತಿಳಿಸಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸರಕಾರದ ಪೂರ್ವಾನುಮತಿ ಕಡ್ಡಾಯ ಎಂಬ ನೂತನ ನಿಯಮವನ್ನು ರಾಜ್ಯ ಸರ್ಕಾರ ಜಾರಿ ಮಾಡಿತ್ತು.ಸರಕಾರದ ಈ ಆದೇಶವನ್ನು ಪ್ರಶ್ನೆಸಿ ಕೆಲವು ಸಂಘ ಸಂಸ್ಥೆಗಳು ಹೈ ಕೋರ್ಟ್ ಮೊರೆ ಹೋಗಿದ್ದರು.
ವಾದ- ಪ್ರತಿವಾದ ಆಲಿಸಿದ್ದ ಧಾರವಾಡ ಹೈಕೋರ್ಟ್ ನ ಏಕಪೀಠದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು, ಸರಕಾರದ ತೀರ್ಮಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಮುಂದಿನ ಅರ್ಜಿ ವಿಚಾರಣೆಯನ್ನು ನ. 17 ಕ್ಕೆ ಮುಂದೂಡಿದ್ದಾರೆ.
