ಬೆಂಗಳೂರು, ಅ.30- ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜೆಡಿಎಸ್ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿತು.
ಬೆಂಗಳೂರು ಮಹಾನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ನೇತೃತ್ವದಲ್ಲಿಂದು ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಯಾಮುಯಲ್, ಸರ್ಕಾರದ ವಿರುದ್ಧದ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗಲಾಯಿತು. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲದೆ ಬಿ ಖಾತೆಯಿಂದ ಎ ಖಾತೆ ಮಾಡಿಕೊಡುವುದಾಗಿ ಭರವಸೆ ನೀಡಿದೆ. ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಬಡ ಜನತೆಗೆ ಅಧಿಕ ತೆರಿಗೆ ವಿಧಿಸಿದೆ. ಕಾಂಗ್ರೆಸ್ ಸರ್ಕಾರವೇ ಖಾಲಿ ಟ್ರಂಕ್ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ಬೆಂಗಳೂರನ್ನು ಕಸದ ಸಿಟಿ ಮಾಡಿದ್ದಾರೆ. ಬೆಂಗಳೂರಿನ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ನಿಮ ಟ್ರಂಕ್ ಖಾಲಿ ಮಾಡಿದ್ದೀರಿ. ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
