ಬೆಂಗಳೂರು, ಅ.31– ಕರ್ನಾಟಕ ರಾಜ್ಯೋತ್ಸವ ಸಮಿತಿ (ರಿ) ವತಿಯಿಂದ ನಾಳೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.
ನಾಳೆ (ನ.1) ಬೆಳಿಗ್ಗೆ 10.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರು ಬ್ಯಾಂಕ್ ಹತ್ತಿರ ಕನ್ನಡ ತಾಯಿ ಭುವನೇಶ್ವರಿ ಪೂಜೆ ಹಾಗೂ ನಗರ ದೇವತೆ ಶ್ರೀ ಅಣ್ಣಮ ದೇವಿಯ ವೈಭವದ ಮೆರವಣಿಗೆಯನ್ನು ಹಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಾಂಬೆ ಭುವನೇಶ್ವರಿ ಗೆೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರೆ, ವಾಟಾಳ್ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗಾಲ್ ಆಟಗಾರ್ತಿ ಅನುಪಮ ವಾಟಾಳ್ ನಾಗರಾಜ್ ಅವರು ಆಗಮಿಸಲಿದ್ದಾರೆ.
ಇದೇ ವೇಳೆ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದ್, ಆ.ತಿ.ರಂಗನಾಥ್, ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕೆ.ಆರ್.ಕುಮಾರ್, ಮಂಜುನಾಥ್‌ದೇವ್, ಹೆಚ್.ವಿ.ಗಿರೀಶ್‌ಗೌಡ ಮುಂತಾದವರನ್ನು ಸನಾನಿಸಲಾಗುವುದು.ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಬೇಕು ಎಂದು ವಾಟಾಳ್ ನಾಗರಾಜ್ ಅಭಿಮಾನಿ ಸಂಘದ ಅಧ್ಯಕ್ಷ ವಾಟಾಳ್ ಎನ್.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

