ಬೆಂಗಳೂರು, ನ.3– ನಗರದ ಸಂಚಾರ ದಟ್ಟಣೆ ತಗ್ಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಮೆಟ್ರೋ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲೇ ನಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026 ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಎಕ್‌್ಸ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಹೀಗಾಗಿ ಬಹುನಿರೀಕ್ಷಿತ ಗುಲಾಬಿ ಮಾರ್ಗದ ಸಂಚಾರ ಮೇ ತಿಂಗಳಿನಿಂದ ಕಾರ್ಯರಂಭಗೊಳ್ಳುವುದು ಬಹುತಕ ಖಚಿತಪಟ್ಟಿದೆ.ಕಾಳೇನ ಅಗ್ರಹಾರ ದಿಂದ ನಾಗವಾರ ಮಾರ್ಗ ಇರುವ ಗುಲಾಬಿ ಮಾರ್ಗ 21.25 ಕಿಮೀ ವಿಸ್ತೀರ್ಣವಿದ್ದು, ಒಟ್ಟು 18 ಮೆಟ್ರೋ ಸ್ಟೇಷನ್‌ಗಳು ಇರಲಿವೆ.
ಅದರಲ್ಲಿ 6 ಎಲಿವೇಟೆಡ್ ಸ್ಟೇಷನ್‌ಗಳು,ಎರಡು ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್‌ಗಳನ್ನ ಒಳಗೊಂಡಿದೆ. ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುವ ಗುಲಾಬಿ ಮಾರ್ಗದಲ್ಲಿ 13.76 ಕಿಮೀ ಭೂಗತ ಮಾರ್ಗ ಒಳಗೊಂಡಿರುವುದು ವಿಶೇಷವಾಗಿದೆ.
