ನಿತ್ಯ ನೀತಿ : ಎಲ್ಲವನ್ನೂ ಸಹಿಸಿಕೊಳ್ಳುವ ಶಕ್ತಿ ಎಲ್ಲರಲ್ಲೂ ಇರುವುದಿಲ್ಲ. ಯಾರು ಎಲ್ಲವನ್ನೂ ಸಹಿಸಿಕೊಂಡು ನಿಲ್ಲಬಲ್ಲರೋ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ.
ಪಂಚಾಂಗ : ಮಂಗಳವಾರ, 04-11-2025
ಶೋಭಕೃತ್ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ರೇವತಿ / ಯೋಗ: ವಜ್ರ / ಕರಣ: ಗರಜ
ಸೂರ್ಯೋದಯ – ಬೆ.06.14
ಸೂರ್ಯಾಸ್ತ – 5.52
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ವೃಷಭ: ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು.
ಮಿಥುನ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಕಟಕ: ಪತ್ರಿಕೆ ಮತ್ತು ಕೆಲವು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಕೆಲಸದ ಅಸ್ಥಿರತೆ ಕಾಡಲಿದೆ.
ಸಿಂಹ: ಸುತ್ತಮುತ್ತಲಿನ ಜನರೊಂದಿಗೆ ಜಗಳ ವಾಡದಿರುವುದು ಸೂಕ್ತ.
ಕನ್ಯಾ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ.
ತುಲಾ: ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿ ಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.
ವೃಶ್ಚಿಕ: ಆಸ್ತಿ, ಅಪಾರ್ಟ್ಮೆಂಟ್ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಧನುಸ್ಸು: ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಮಕರ: ಅ ಕೃತ ಪ್ರಯಾಣ ಕೈಗೊಳ್ಳುವಿರಿ ಮತ್ತು ಅದರಿಂದ ಪ್ರಯೋಜನ ಸಿಗಲಿದೆ.
ಕುಂಭ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಮೀನ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
