Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023)

ನಿತ್ಯ ನೀತಿ : ಸತ್ಕರ್ಮಾನುಷ್ಠಾನವನ್ನೇ ಮಾಡುತ್ತ ಬಂದರೆ ವ್ಯಕ್ತಿಯ ಅಂತಃಕರಣ ಪರಿಶುದ್ಧಗೊಂಡು ದೇವರ ಒಲುಮೆಗೆ ಪಾತ್ರನಾಗುತ್ತಾನೆ.

ಪಂಚಾಂಗ ಬುಧವಾರ 29-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಮೃಗಶಿರಾ / ಯೋಗ: ಸಾಧ್ಯ ? ಕರಣ: ವಣಿಜ್

ಸೂರ್ಯೋದಯ : ಬೆ.06.25
ಸೂರ್ಯಾಸ್ತ : 05.51
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ವೃಷಭ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.

ಕಟಕ: ಸ್ನೇಹಿತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.

ತುಲಾ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.

ಮಕರ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ಆಸ್ತಿ ಸಂಬಂಧಿತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.

RELATED ARTICLES

Latest News