ಬೆಂಗಳೂರು, ನ.6– ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲಿ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್‌ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದಾರೆ.
ಇತ್ತೀಚೆಗೆ ತಾವು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಮಾಡುವಂತೆ ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಹರೀಶ್ ರಾಯ್ ಅವರ ಮನವಿಗೆ ಸ್ಪಂದಿಸಿದ ಆ್ಯಕ್ಷನ್ ಪ್ರಿನ್‌್ಸ ಧ್ರುವಸರ್ಜಾ, ಸುದೀಪ್, ಶಿವರಾಜ್‌ಕುಮಾರ್ ಸೇರಿದಂತೆ ಹಲವರು ಕಲಾವಿದರು ಆರ್ಥಿಕ ಸಹಾಯ ಮಾಡಿದ್ದರೂ ಕೂಡ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಓಂ, ಜೋಡಿಹಕ್ಕೆ, ಕೆಜಿಎಫ್ 1, ಕೆಜಿಎಫ್ 2 ಸೇರಿದಂತೆ ಹಲವಾರು ಚಿತ್ರಗಳಲ್ಲಿ ಹರೀಶ್ ರಾಯ್ ಅವರು ತಮ ಅಭಿಮಾನದಿಂದ ಗಮನ ಸೆಳೆದಿದ್ದರು. ಅವರ ನಿಧನಕ್ಕೆ ಚಂದನವನದ ಹಲವು ಕಲಾವಿದರು, ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.
