Friday, November 22, 2024
Homeಜಿಲ್ಲಾ ಸುದ್ದಿಗಳು | District Newsಜನರ ನಿದ್ದೆ ಕೆಡಿಸಿದ್ದ ನರಭಕ್ಷಕ ಹುಲಿ ಸೆರೆ

ಜನರ ನಿದ್ದೆ ಕೆಡಿಸಿದ್ದ ನರಭಕ್ಷಕ ಹುಲಿ ಸೆರೆ

ನಂಜನಗೂಡು, ನ.28- ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಹುಲಿಯನ್ನು ಕೊನೆಗೂ ಮುಂಜಾನೆ ಸೆರೆ ಹಿಡಿಯಲಾಗಿದೆ. ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಮುಂಜಾನೆ 1.45ರ ಹೊತ್ತಿಗೆ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚು ಮದ್ದು ನೀಡಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಸುಮಾರು 10 ವರ್ಷದ ಗಂಡು ಹುಲಿ ಇದಾಗಿದ್ದು ಸದ್ಯ ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ಕಳೆದ ನ.24ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ಹುಲಿ ದಾಳಿ ಮಾಡಿ ತಿಂದು ಹಾಕಿತ್ತು. ನಂತರ ಮರು ದಿನ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದ ಗ್ರಾಮದ ಜನರು ಆತಂಕಗೊಂಡಿದ್ದರು.

ಇನ್ನು ಹುಲಿ ಒಮ್ಮೆ ಬೇಟೆಯಾಡಿದ ಸ್ಥಳಕ್ಕೆ ಮತ್ತೊಮ್ಮೆ ಬಂದೇ ಬರುತ್ತದೆ ಎಂದು ಆ ಸ್ಥಳದಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ಅರಣ್ಯ ಸಿಬ್ಬಂದಿ ನಿಗಾ ವಹಿಸಿದ್ದರು. ಕಳೆದ ರಾತ್ರಿ 9ರ ಸಮಯದಲ್ಲಿ ಹಸು ತಿನ್ನಲು ಹುಲಿ ಬಂದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು

ಮಧ್ಯರಾತ್ರಿ ಮತ್ತೆ ಹುಲಿ ಬಂದಾಗ ಅದಕ್ಕೆ ಪಶು ವೈದ್ಯ ಡಾ.ವಾಸೀಂ ಜಾ-ರ್ ಅರವಳಿಕೆ ನೀಡುವಲ್ಲಿ ಯಶಸ್ವಿಯಾದರು. ಕೆಲವೇ ಕ್ಷಣದಲ್ಲಿ ಹುಲಿಯನ್ನು ಬಲೆ ಹಾಕಿ ಸೆರೆ ಹಿಡಿದು ಬೆಳಗಿನ ಜಾವವೇ ಮೈಸೂರು ಮೃಗಾಲಯಕ್ಕೆ ಸಾಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಕಳೆದ ಮೂರು ದಿನದಿಂದ ಹುಲಿ ಸೆರೆಗೆ ಸಾಕಾನೆ ಹಾಗೂ ಡ್ರೋನ್ ಬಳಸಿ ನಿರಂತರ ಶೋಧ ನಡೆಸಲಾಗಿತ್ತು. ಸಾಕಾನೆಗಳಾದ ಪಾರ್ಥ, ರೋಹಿತ್, ಹಿರಣ್ಯಾ ಆನೆಗಳ ಮೂಲಕ ಕಾರ್ಯಾಚರಣೆ ನಡೆಯುತ್ತಿತ್ತು. ಟ್ರ್ಯಾಪ್ ಕ್ಯಾಮೆರಾಗಳನ್ನು ಹಾಕಿ ಹುಲಿಗಾಗಿ ಹುಡುಕಾಟ ನಡೆಸಲಾಗಿತ್ತು.

ಈ ವೇಳೆ ಎರಡು ಹುಲಿಗಳ ಓಡಾಟ ಪತ್ತೆಯಾಗಿತ್ತು. ಅಷ್ಟೇ ಅಲ್ಲ ಸಾಕುಪ್ರಾಣಿಗಳ ಮೇಲೆ ದಾಳಿ ನಡೆದಿದ್ದೂ ಪತ್ತೆಯಾಗಿತ್ತು. ಅಧಿಕಾರಿಗಳು ಸೇರಿ 207 ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿತ್ತು ಸುಮಾರು 100 ಗಿರಿಜನರನ್ನು ಹುಲಿ ಪತ್ತೆ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿತ್ತು.

RELATED ARTICLES

Latest News