ಬೆಂಗಳೂರು,ಫೆ.23- ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪ್ರೊ.ಮೈಲಾರಪ್ಪ ವಿರುದ್ಧ ಪವಿತ್ರ ಎಂಬ ಮಹಿಳೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿ ದ್ದರು.
ಆ ಸಂದರ್ಭದಲ್ಲಿ ದೂರನ್ನು ಹಿಂತೆಗೆದುಕೊಳ್ಳುವಂತೆ ಸ್ನೇಹಮಯಿ ಕೃಷ್ಣ ಪವಿತ್ರ ಅವರಿಗೆ ಬೆದರಿಕೆ ಹಾಗೂ ಒತ್ತಡ ಹಾಕಿದ್ದರು.ಈ ಹಿನ್ನೆಲೆಯಲ್ಲಿ ಪವಿತ್ರಾ ಅವರು ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಮೇಲೆ ಲಂಚದ ಆರೋಪ ಮಾಡಿದ್ದರು. ಈ ಬಗ್ಗೆ ಅಧಿಕಾರಿ ನಟೇಶ್ ಎಂಬುವರು ನಗರದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಕಳುಹಿಸಿ ದ್ದಾರೆ. ಈ ನಡುವೆ ಸ್ನೇಹಮಯಿ ಕೃಷ್ಣ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕ್ಷಮೆ ಕೇಳಿದ್ದಾರೆ.
