ಬೆಂಗಳೂರು, ನ.29-ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂಬರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಉದ್ದೇಶಿಸಿದೆ.ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕೇವಲ ನಾಲ್ಕು ಕ್ಷೇತ್ರಗಳಲ್ಲಿ ಸ್ರ್ಪಸಲು ಸಿದ್ಧತೆ ನಡೆಸಿದೆ. ಹಾಸನ, ತುಮಕೂರು, ಮಂಡ್ಯ, ಕೋಲಾರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಸ್ರ್ಪಸುವ ಇಂಗಿತವನ್ನು ಬಿಜೆಪಿ ವರಿಷ್ಠರ ಮುಂದಿಟ್ಟಿದೆ. ಹಾಸನ, ಮಂಡ್ಯ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಸಂಸದರಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಪ್ರತಿನಿಸಿರುವ ಹಾಸನ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿಗೆ ತಕರಾರು ಇಲ್ಲ.ಕೋಲಾರ, ತುಮಕೂರು, ರಾಯಚೂರು ಕ್ಷೇತ್ರಗಳಲ್ಲಿ ಹಾಲಿ ಸಂಸದರಿದ್ದರೂ ಜೆಡಿಎಸ್ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಅನಿವಾರ್ಯತೆಗೆ ಬಿಜೆಪಿ ಸಿಲುಕಿದೆ.
ಜೆಡಿಎಸ್-ಬಿಜೆಪಿ ಜತೆಗೂಡಿ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಸುವ ಗುರಿಯೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸುತ್ತಿವೆ. ಮಂಡ್ಯ ಕ್ಷೇತ್ರದಲ್ಲಿ ಚುನಾಯಿತರಾಗಿದ್ದ ಸಂಸದೆ ಸುಮಲತಾ ಬಿಜೆಪಿ ಸೇರುವ ಸಾಧ್ಯತೆ ಇದೆ. ಹೀಗಾಗಿ ಜೆಡಿಎಸ್ ಕೋರಿರುವ ನಾಲ್ಕು ಕ್ಷೇತ್ರಗಳ ಬಗ್ಗೆ ಬಿಜೆಪಿ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ.
ಸುರಂಗದಲ್ಲಿದ್ದಾಗ ವಾಕ್, ಯೋಗ ಮಾಡುತ್ತಿದ್ದರಂತೆ ಕಾರ್ಮಿಕರು
ಪಂಚರಾಜ್ಯ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದ ಹಿನ್ನೆಲೆಯಲ್ಲಿ ಮಿತ್ರ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಸ್ರ್ಪಸಿದ್ದವು. ಮೈತ್ರಿಗೆ ಹೀನಾಯ ಸೋಲಾಗಿತ್ತು. ಆದರೆ, ಬಿಜೆಪಿ 25 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಸಿತ್ತು. ಜೆಡಿಎಸ್, ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದ್ದವು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಸ್ರ್ಪಸಿದ್ದ 26 ಅಭ್ಯರ್ಥಿಗಳು ಪರಾಭವಗೊಂಡಿದ್ದರು. 2024ರ ಚುನಾವಣೆಯಲ್ಲೂ ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಆಗ ಕಾಂಗ್ರೆಸ್‍ನೊಂದಿಗೆ, ಈಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಅಷ್ಟೇ. ಬಿಜೆಪಿ ಗೆದ್ದಿದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದ್ದರೆ, ಜೆಡಿಎಸ್ ಬಿಜೆಪಿ ಸಹಕಾರದಿಂದ ಮೂರ್ನಾಲ್ಕು ಕ್ಷೇತ್ರಗಳಲ್ಲಿ ಗೆಲುವ ಪಡೆಯಲು ಸಿದ್ಧತೆ ಆರಂಭಿಸಿದೆ.
ಡಿಸೆಂಬರ್‍ನಲ್ಲಿ ರಾಜ್ಯದ ಲೋಕಸಭಾ ಚುನಾವಣೆಗೆ ಸಂಬಂಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆಯಾಗಲಿದ್ದು, ಉಭಯ ಪಕ್ಷಗಳು ಜಂಟಿ ಹೋರಾಟ ನಡೆಸಲಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.