Friday, November 22, 2024
Homeರಾಷ್ಟ್ರೀಯ | Nationalಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ

ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು,ನ.29- ನೆರೆಯ ಚೀನಾ ದೇಶದಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ತತ್‍ಕ್ಷಣವೇ ಆರೋಗ್ಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಕಾಂಡ ಮತ್ತು ತಮಿಳುನಾಡು ಸೇರಿದಂತೆ ಒಟ್ಟು ಐದು ರಾಜ್ಯಗಳು ಚೀನಾದಲ್ಲಿ ಉಸಿರಾಟದ ಕಾಯಿಲೆಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸೂಚನೆ ಕೊಟ್ಟಿದೆ.


ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯವರು ಈ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪ್ರತ್ಯೇಕ ಪತ್ರ ಬರೆದು ಆಸ್ಪತ್ರೆಯಲ್ಲಿ ಅಗತ್ಯವಿರುವ ಐಸಿಯು ವಾರ್ಡ್, ಬೆಡ್, ಆಕ್ಸಿಜನ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕಡೆ ಹೆಚ್ಚಿನ ಗಮನಹರಿಸಿ ಎಂದು ಸಲಹೆ ಕೊಟ್ಟಿದ್ದಾರೆ.

ಉತ್ತರಾಕಾಶಿ ಸುರಂಗ ದಿಂದ ಬದುಕಿಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ

ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಸೋಂಕು ಭಾರತದಲ್ಲಿ ಹೆಚ್ಚಿನ ದುಷ್ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಇದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ದೊಡ್ಡವರಲ್ಲಿ ಕಂಡುಬಂದರೆ 5ರಿಂದ 7 ದಿನಗಳ ಒಳಗೆ ವಾಸಿಯಾಗುತ್ತದೆ. ಮಕ್ಕಳಲ್ಲಿ ಕಂಡರೆ ಎರಡು ವಾರ ವಿಶ್ರಾಂತಿ ಪಡೆಯಬೇಕಾಗುತ್ತದೆ. ಈ ಸೋಂಕು ಕಡಿಮೆ ರೋಗ ಪ್ರಮಾಣವನ್ನು ಹೊಂದಿದೆ. ಆದರೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ.

ಮಕ್ಕಳು, ವೈದ್ಯರು ಮತ್ತು ಗರ್ಭಿಣಿಯರ ಮೇಲೆ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇತರೆ ಬೇರೆ ಯಾವುದಾದರೂ ಕಾಯಿಲೆಗಳಿಂದ ಬಳಲುತ್ತಿದ್ದರೆ ಅಂಥವರಿಗೆ ಜೀವಕ್ಕೂ ಅಪಾಯ. ಜ್ವರ, ಶೀತ, ಅಸ್ವಸ್ಥತೆ, ಮೈಯಾಲ್ಜಿಯಾ, ವಾಕರಿಕೆ, ಸೀನುವಿಕೆ, ಮತ್ತು ಒಣ ಕೆಮ್ಮು ಹೆಚ್ಚಿನ ಅಪಾಯದ ಗುಂಪುಗಳಲ್ಲಿ ಮೂರು ವಾರಗಳವರೆಗೆ ಇರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯು ತನ್ನ ಸಿಬ್ಬಂದಿಗೆ ಜಾಗರೂಕವಾಗಿರಲು ಸೂಚಿಸಿದ್ದು, ಕೆಲವು ಕಡೆ ಕ್ಷಿಪ್ರ ಪ್ರತಿಕ್ರಿಯೆ ನೀಡುವ ತಂಡಗಳನ್ನು ರಚನೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಇದಕ್ಕಾಗಿ ಪ್ರತ್ಯೇಕ ವಾರ್ಡ್‍ಗಳನ್ನು ಮೀಸಲಿಡಲಾಗಿದ್ದು, ಅಗತ್ಯ ಕಂಡಬಂದರೆ ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಕಾರ್ಯದರ್ಶಿ ಐದು ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

RELATED ARTICLES

Latest News