ಬೆಂಗಳೂರು,ನ.29- ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸಿರಲಿಲ್ಲ.
ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ
ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ. ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಬರೆದುಕೊಂಡಿದ್ದಾರೆ.
ಸೊಪ್ಪು, ಹಣ್ಣು ಮಾರುವವರನ್ನು ಎತ್ತಂಗಡಿ ಮಾಡುವುದನ್ನು ಬಿಟ್ಟು, ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು, ಕೊಟ್ಟಿರುವ ಗಸ್ತು ವಾಹನದಲ್ಲಿ ವಸೂಲಿ, ಹಫ್ತಾ ತೆಗೆಯುವುದು ಬಿಟ್ಟು, ಕಟ್ಟುನಿಟ್ಟಾಗಿ ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು ಎಂದು ಕಿಡಿಕಾರಿದ್ದಾರೆ.