ಬೆಂಗಳೂರು, ನ.29- ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ನೀಡಿದ ಮಾಹಿತಿಯಂತೆ ವೈಟ್ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಸವಾರ ಹಾಗೂ ದ್ವಿಚಕ್ರ ವಾಹನವನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ವೈಟ್ಫೀಲ್ಡ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು- ಗುಂಜೂರು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ 26ರಂದು ಬೆಳಗ್ಗೆ 11.45ರ ಸುಮಾರಿನಲ್ಲಿ ನೋಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ವಾಹನ ಚಲಾಯಿಸುತ್ತಿದ್ದನು.
26ನೇ ಬೆಂಗಳೂರು ಟೆಕ್ ಸಮ್ಮಿಟ್ ಉಧ್ಘಾಟನೆ, ಇಲ್ಲಿದೆ ಹೈಲೈಟ್ಸ್
ಈ ಬಗ್ಗೆ ಸಾರ್ವಜನಿಕರೊಬ್ಬರು ಗಮನಿಸಿ ವಾಹನದ ಫೋಟೋ ತೆಗೆದು ಬೆಂಗಳೂರು ನಗರ ಸಂಚಾರ ವಿಭಾಗದ ಸಾಮಾಜಿಕ ಜಾಲತಾಣದ ಟ್ವಿಟ್ಟರ್ ಅಕೌಂಟ್ಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಸವಾರ ಹಾಗೂ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವರ್ತೂರು ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆ ವಶಕ್ಕೆ ನೀಡಿದ್ದು, ಸವಾರನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುತ್ತಾರೆ.