ಬೆಂಗಳೂರು,ಫೆ.24- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನನ್ನು ತಡೆದು ಲಗೇಜ್ ಪರಿಶೀಲನೆ ವೇಳೆ ಸುಮಾರು 2.8 ಕೋಟಿ ರೂ ಮೌಲ್ಯ 8 ಕೆಜಿ ಹೈಡ್ರೋ ಪೋನಿಕ್ ಗಾಂಜಾ ಪತ್ತೆಯಾಗಿದೆ.
ಇನ್ನೊಂದು ಪ್ರಕರಣದಲ್ಲಿ ಹಾಂಕಾಂಗ್‌ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕನ ಬಳಿಯಿಂದ 900 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 31.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ ಇಲಾಖೆ ತಿಳಿಸಿದೆ.
ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಕಸ್ಟಮ್ಸೌಅಧಿಕಾರಿಗಳ ಜಂಟಿ ಕಾರ್ಯಾಚರಣೆಯಿಂದ ಈ ಮಾದಕ ಕಳ್ಳಸಾಗಣೆ ಪತ್ತೆಯಾಗಿದೆ. ಇಬ್ಬರನ್ನುವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಇವರು ಮಾದಕ ಕಳ್ಳಸಾಗಣೆ ಜಾಲದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಶಂಕೆ ಇದೆ.
ಪ್ರಸ್ತುತ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದೆ.
