Saturday, April 18, 2026
Homeರಾಜಕೀಯ'ಅರಾಜಕತೆ' ಕಾಂಗ್ರೆಸ್‌‍ ಸರ್ಕಾರದ ಆರನೇ ಗ್ಯಾರೆಂಟಿ : ಆರ್‌.ಅಶೋಕ್‌

‘ಅರಾಜಕತೆ’ ಕಾಂಗ್ರೆಸ್‌‍ ಸರ್ಕಾರದ ಆರನೇ ಗ್ಯಾರೆಂಟಿ : ಆರ್‌.ಅಶೋಕ್‌

'Anarchy' is the sixth guarantee of the Congress government: R. Ashok

ಬೆಂಗಳೂರು,ಫೆ.25- ಕಾಂಗ್ರೆಸ್‌‍ ಸರ್ಕಾರದ ಆರನೇ ಗ್ಯಾರೆಂಟಿ; ಅರಾಜಕತೆ ಗ್ಯಾರೆಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಎಕ್‌್ಸನಲ್ಲಿ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. ಕಾಂಗ್ರೆಸ್‌‍ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಒತ್ತಾಯಿಸಿ ಪ್ರತಿಭಟನೆ, ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್‌ 11 ರಿಂದ ಒಪಿಡಿ ಬಂದ್‌. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್‌ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ, ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯದ ಪ್ರತಿಭಟನೆ, ಬಿಡದಿ ಟೌನ್‌ಶಿಪ್‌ ಯೋಜನೆ, ಸೆಣಬು ಸಬ್ಸಿಡಿ ಬಂದ್‌.

ಕಬ್ಬು ಬಿಲ್‌ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ, 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ಹಮಿಕೊಂಡಿದ್ದಾರೆ.

ಅರಾಜಕ ಮುಖ್ಯಮಂತ್ರಿಸಿದ್ದರಾಮಯ್ಯನವರೇ, ನಿಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News