Saturday, April 18, 2026
Homeರಾಜ್ಯರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ : ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ : ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

2,84,881 government posts vacant in various departments of the state

ಬೆಂಗಳೂರು,ಫೆ.25- ವಿವಿಧ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಸರ್ಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿವೆ.

ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯಲ್ಲಿ ಅತಿಹೆಚ್ಚಿನ ಹುದ್ದೆಗಳು ಖಾಲಿ ಇವೆ. ಈ ಹಿಂದೆ 2019ರಿಂದ 23ರವರೆಗೆ ರಾಜ್ಯದಲ್ಲಿ ಮಹಾಮಾರಿ ಕೋವಿಡ್‌ 19 ಇದ್ದ ಕಾರಣ ಯಾವುದೇ ಹುದ್ದೆಗಳನ್ನು ತುಂಬಲು ಸಾಧ್ಯವಾಗಿರಲಿಲ್ಲ. ಇಡೀ ಆರ್ಥಿಕ ಚಟುವಟಿಕೆಯೇ ಸಂಪೂರ್ಣವಾಗಿ ಸ್ತಬ್ದಗೊಂಡು ಜನರು ದೈನಂದಿನ ಜೀವನ ನಡೆಸುವುದೇ ದುಸ್ತರವಾಗುವಂತಹ ಸಂದರ್ಭ ಬಂದೊದಗಿತ್ತು.

ಹಾಗಾಗಿ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿರಲಿಲ್ಲ. 2023ರ ವರ್ಷದ ಪ್ರಾರಂಭದಲ್ಲಿ ಕೆಲವು ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಸರ್ಕಾರ ಮುಂದಾಗಿತ್ತು.

ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಕಾರಣ ನೀತಿಸಂಹಿತೆ ಜಾರಿಯಲ್ಲಿದುದ್ದರಿಂದ ಈ ಪ್ರಸ್ತಾವನೆಯು ಕೇವಲ ಕಾಗದದಲ್ಲೇ ಉಳಿಯಿತ್ತೇ ಹೊರತು ಅನುಷ್ಠಾನ ರೂಪಕ್ಕೆ ಬರಲಿಲ್ಲ.

ನಂತರ ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಇತಿಹಾಸ. ಚುನಾವಣಾ ಪೂರ್ವ ಜನತೆಯ ಮುಂದೆ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಿರುದ್ಯೋಗ ನಿರ್ವಹಣೆಗೆ ನಮ ಸರ್ಕಾರ ಮೊದಲ ಆದ್ಯತೆ ಕೊಡುತ್ತದೆ ಎಂದು ಹೊಸ ಕನಸುಗಳನ್ನು ಬಿತ್ತಿದ್ದರು.
ಇದಾದ ನಂತರ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿತಾದರೂ ಹೈಕೋರ್ಟ್‌ನಲ್ಲಿ ಕೆಲವು ಸಂಘಟನೆಗಳು ಪ್ರಶ್ನೆ ಮಾಡಿರುವ ಕಾರಣ ಸರ್ಕಾರ ಕೂಡ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ.

ಹೀಗೆ ಒಂದಿಲ್ಲೊಂದು ಕಾರಣಗಳಿಂದ ಸರ್ಕಾರಿ ಇಲಾಖೆಗಳಲ್ಲಿ ಹುದ್ದೆಗಳು ದಿನದಿಂದ ದಿನಕ್ಕೆ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಗಿವಿಯೇ ವಿನಃ ಭರ್ತಿಯಾಗುತ್ತಿಲ್ಲ. ಹೀಗಾಗಿಯೇ ಯುವ ಉದ್ಯೋಗಾಂಕಾಕ್ಷಿಗಳ ಸಹನೆ ಕಟ್ಟೆ ಒಡೆದು ಬೃಹತ್‌ ಪ್ರತಿಭಟನೆಗೆ ಸಾಕ್ಷಿಯಾಯಿತು.
ರಾಜ್ಯದ ವಿವಿಧ ಸರ್ಕಾರಿ ಮತ್ತು ಅರೆ-ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.84 ಲಕ್ಷಕ್ಕೂ ಹೆಚ್ಚು (2,84,881) ಹುದ್ದೆಗಳು ಖಾಲಿ ಇವೆ. ಈ ಪೈಕಿ ಅತಿ ಹೆಚ್ಚು ಖಾಲಿ ಹುದ್ದೆಗಳು ಶಿಕ್ಷಣ ಇಲಾಖೆಯಲ್ಲಿದ್ದು (ಸುಮಾರು 79,694), ಒಟ್ಟಾರೆಯಾಗಿ ಆರ್ಥಿಕ ಇಲಾಖೆಯು ಪ್ರಸ್ತುತ 24,300 ಹುದ್ದೆಗಳ ಭರ್ತಿಗೆ ಮಾತ್ರ ಮಂಜೂರಾತಿ ನೀಡಿದೆ.

ಒಟ್ಟು 43 ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿದ್ದು, ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ 101420, ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಸೇರಿ 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದರಾಬಾದ್‌ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.

ಖಾಲಿ ಇರುವ ಹುದ್ದೆಗಳು
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ: 79,694 ಹುದ್ದೆಗಳು (ಅತಿ ಹೆಚ್ಚು).
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ: 37,572 ಹುದ್ದೆಗಳು.
ಕೃಷಿ – 6876
ಪಶುಸಂಗೋಪನೆ – 11020
ಹಿಂದುಳಿದ ವರ್ಗಗಳ ಕಲ್ಯಾಣ- 8525
ಆರ್ಥಿಕ – 7668
ಮೀನುಗಾರಿಕೆ – 838
ಆಹಾರ ಮತ್ತು ನಾಗರಿಕ ಪೂರೈಕೆ- 1442
ಅರಣ್ಯ – 6478
ಉನ್ನತ ಶಿಕ್ಷಣ – 13,599
ಒಳಾಡಳಿತ – 28,188
ಕಾನೂನು – 7659
ಅಲ್ಪಸಂಖ್ಯಾತ ಕಲ್ಯಾಣ- 4972
ಕಂದಾಯ – 10867
ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ – 10504
ಪರಿಶಿಷ್ಟ ಜಾತಿ ಕಲ್ಯಾಣ- 9646
ಶಿಕ್ಷಣ – 79,694
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ – 3391

RELATED ARTICLES

Latest News