Sunday, April 19, 2026
Homeರಾಜಕೀಯಜಿ.ಪಂ., ತಾ.ಪಂ. ಚುನಾವಣೆಗೆ ಬಿಜೆಪಿ- ಜೆಡಿಎಸ್‌‍ ಮೈತ್ರಿ : ದೇವೇಗೌಡರು

ಜಿ.ಪಂ., ತಾ.ಪಂ. ಚುನಾವಣೆಗೆ ಬಿಜೆಪಿ- ಜೆಡಿಎಸ್‌‍ ಮೈತ್ರಿ : ದೇವೇಗೌಡರು

BJP-JDS alliance for G.P., T.P. elections: Deve Gowda

ಬೆಂಗಳೂರು,ಫೆ.25- ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು.

ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಪ್ರಾದೇಶಿಕ ಪಕ್ಷ. ಬಿಜೆಪಿ ರಾಷ್ಟ್ರೀಯ ಪಕ್ಷ. ಅವರು ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆ ಎಂದು ಕಾದುನೋಡೋಣ ಎಂದರು.ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ.

ಚ ಬಿಜೆಪಿಯ ಕೇಂದ್ರದ ನಾಯಕರೊಂದಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಚರ್ಚೆ ಮಾಡುತ್ತಾರೆ ಎಂದ ಅವರು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

ಜೆಡಿಎಸ್‌‍ನಲ್ಲಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಹುದ್ದೆ ಕೊಡುವುದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಪ್ರತಿಯೊಂದು ನೆನಪಿನ ಶಕ್ತಿ ಇದೆ. ಪ್ರತಿಯೊಂದಕ್ಕೂ ಸಮಯ ಬಂದಾಗ ಪ್ರತಿಕ್ರಿಯಿಸುತ್ತೇನೆ ಎಂದರು.

ವಿಜಯಪುರದಲ್ಲಿ ಫೆ.27 ರಂದು ಜೆಡಿಎಸ್‌‍ ಸಮಾವೇಶ ನಡೆಸಲಾಗುತ್ತದೆ. ಈಗಾಗಲೇ ಅದರ ಪೂರ್ವ ಸಿದ್ಧತೆಗಳು ಪ್ರಾರಂಭವಾಗಿವೆ. ಆ ಸಮಾವೇಶದಲ್ಲಿ ಪಾಲ್ಗೊಳ್ಳಲು ನನಗೂ ಆಹ್ವಾನ ನೀಡಿದ್ದಾರೆ. ರಾಜ್ಯಸಭೆಯಲ್ಲಿ ರಾಜ್ಯದ ನೀರಾವರಿ ವಿಚಾರ ಸೇರಿದಂತೆ ಏನು ಪ್ರಸ್ತಾಪ ಮಾಡಬೇಕೊ ಅದನ್ನು ಮಾಡುತ್ತೇನೆ. ನನ್ನ ರಾಜ್ಯಸಭಾ ಅವಧಿ ಮುಗಿದರೂ ಮಾಧ್ಯಮದವರನ್ನು ಭೇಟಿಯಾಗುತ್ತೇನೆ ಎಂದು ಅವರು ಹೇಳಿದರು.

ಬೆಂಗಳೂರನ್ನು ಐದು ಭಾಗವಾಗಿ ವಿಂಗಡಿಸಲಾಗಿದೆ. ಇದರ ಬಗ್ಗೆ ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಸೇರಿ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌‍ ಕೋರ್‌ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ವಿಧಾನಪರಿಷತ್‌ ಮಾಜಿ ಸದಸ್ಯರಾದ ಎಚ್‌.ಎಂ.ರಮೇಶ್‌ಗೌಡ, ಕೆ.ಎ.ತಿಪ್ಪೇಸ್ವಾಮಿ ಮೊದಲಾದ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

RELATED ARTICLES

Latest News