Tuesday, April 21, 2026
Homeರಾಜ್ಯಗರ್ಭಿಣಿಯಾದ ಪಿಯು ವಿದ್ಯಾರ್ಥಿನಿ, ವಸತಿ ಶಾಲೆಗಳಲ್ಲಿ ಸುರಕ್ಷತೆ ಬಗ್ಗೆ ವ್ಯಾಪಕ ಚರ್ಚೆ

ಗರ್ಭಿಣಿಯಾದ ಪಿಯು ವಿದ್ಯಾರ್ಥಿನಿ, ವಸತಿ ಶಾಲೆಗಳಲ್ಲಿ ಸುರಕ್ಷತೆ ಬಗ್ಗೆ ವ್ಯಾಪಕ ಚರ್ಚೆ

Pregnant PU student, widespread discussion on safety in residential schools

ಕೊಪ್ಪಳ,ಫೆ.25- ಪಿಯುಸಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಸತಿ ಶಾಲೆಗಳಲ್ಲಿನ ಸುರಕ್ಷತೆ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಆರೋಪಿ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಫೆ. 19ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಗರ್ಭಿಣಿ ಯಾಗಿರುವುದು ಗೊತ್ತಾಗಿದೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ವಿಷಯವನ್ನು ಮುಚ್ಚಿಡಲು ಯತ್ನಿಸಿದರೆಂಬ ಆರೋಪದ ಹಿನ್ನೆಲೆ ವಸತಿಶಾಲೆಯ ಪ್ರಾಂಶುಪಾಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಪ್ರಾಂಶುಪಾಲರ ಅಮಾನತಿಗೆ ಒತ್ತಾಯಿಸಿ ಎಸ್‌‍ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ

ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ. ಅಪ್ರಾಪ್ತೆಯರ ಸುರಕ್ಷತೆ ಹಾಗೂ ವಸತಿಶಾಲೆಗಳ ಮೇಲ್ವಿಚಾರಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಆಗ್ರಹವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

RELATED ARTICLES

Latest News