ನವದೆಹಲಿ, ಫೆ. 26: ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿ 100 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಹೊರ ಹೊಮಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ ಮಂದೆ ಸಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೆಟಾದ ವೇದಿಕೆಯಾದ ಇನ್‌ಸ್ಟಾಗ್ರಾಂ ಅಕೌಂಟ್ ತೆರೆದಿದ್ದರು. ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.
ಪ್ರಧಾನಿ ಮೋದಿ ನಂತರ, ಡೊನಾಲ್‌್ಡ ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷರು 14.4 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಅಂತಿಮವಾಗಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.
ಈ ದತ್ತಾಂಶವು ಪ್ರಧಾನಿ ಮೋದಿಯವರ ಜಾಗತಿಕ ವ್ಯಾಪ್ತಿ ಮತ್ತು ಪ್ರಪಂಚದಾದ್ಯಂತದ ಯುವಜನರಲ್ಲಿ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಭಾರತದೊಳಗೆ ಸಹ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ನಡುವೆ ಫಾಲೋವರ್ಸ್‌ಗಳ ಸಂಖ್ಯೆಯಲ್ಲಿ ಗಮನಾರ್ಹ ವ್ಯತ್ಯಾಸವಿದೆ.
ಭಾರತವನ್ನೇ ಪರಿಗಣಿಸಿದರೆ, ಪ್ರಧಾನಿ ಮೋದಿ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಎರಡನೇ ವ್ಯಕ್ತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್.
16.1 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗಿಂತ ಬಹಳ ಹಿಂದಿದ್ದಾರೆ.ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
