ಬೆಂಗಳೂರು,ನ.30- ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಹಾಗೂ ಒಡಿಶಾ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 50 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಾರತ್‍ಹಳ್ಳಿ ಮತ್ತು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಂಡು ಮೂವರು ಡ್ರಗ್ ಪೆಡ್ಲರ್‍ಗಳನ್ನು ವಶಕ್ಕೆ ಪಡೆದು, 50 ಲಕ್ಷ ಮೌಲ್ಯದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂ 150 ಎಕ್ಸ್‍ಟಸಿ ಪಿಲ್ಸ್ ಗಳು ಮತ್ತು 15 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮಾರತ್‍ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಒರಿಸ್ಸಾ ಮೂಲದ ಇಬ್ಬರು ಆರೋಪಿ ಗಳು ಸುಮಾರು 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಫುಟ್‍ಪಾತ್ ಮೇಲೆ ತಳ್ಳುವ ಗಾಡಿಯಲ್ಲಿ ತಿಂಡಿ-ತಿನಿಸುಗಳ ವ್ಯಾಪಾರ ಮಾಡಿಕೊಂಡಿದ್ದರು.
ಶಿಶು ಮಾರಾಟ ದಂಧೆ : 250ಕ್ಕೂ ಹೆಚ್ಚು ಶಿಶುಗಳ ಮಾರಾಟ ಬೆಳಕಿಗೆ
ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಒರಿಸ್ಸಾದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿ ಮಾಡಿ ಸ್ಥಳೀಯ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಇವರಿಂದ 15 ಕೆಜಿ ಗಾಂಜಾ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತನಾಗಿರುವ ವಿದೇಶಿ ಮೂಲದ ವ್ಯಕ್ತಿಯು 2005ರಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ತನ್ನ ಪಾಸ್‍ಪೋರ್ಟ್ ಮತ್ತು ವೀಸಾ ಅವ ಮುಕ್ತಾಯವಾಗಿದ್ದರೂ ಕೂಡ ನವೀಕರಣ ಮಾಡಿಸಿಕೊಳ್ಳದೆ ಬೆಂಗಳೂರಿನಲ್ಲಿ ಅನಧಿಕೃತವಾಗಿ ನೆಲೆಸಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದನು.
ಈತನ ವಿರುದ್ದ ಎನ್‍ಡಿಪಿಎಸ್ ಕಾಯ್ದೆ ಜೊತೆಗೆ ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಈತನಿಂದ ನಿಷೇಧಿತ ಮಾದಕ ವಸ್ತುವಾದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂ 150 ಎಕ್ಸ್‍ಟಸಿ ಪಿಲ್ಸ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
ಪ್ರತಿಷ್ಠಿತ ಕಂಪನಿ ಹೆಸರಲ್ಲಿ ನಕಲಿ ಟೀಪುಡಿ ಮಾರಾಟ:ಬಂಧನ
ಬೆಂಗಳೂರು,ನ.30- ಪ್ರತಿಷ್ಠಿತ ಟಾಟಾ ಕಂಪನಿಯ ಅಗ್ನಿ ಟೀ ಪುಡಿಯನ್ನು ನಕಲು ಮಾಡಿ ಅಸಲಿ ಎಂದು ಮಾರಾಟ ಮಾಡುತ್ತಿದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು 1.26 ಲಕ್ಷ ರೂ. ಮೌಲ್ಯದ ಟೀ ಪೌಡರ್‍ನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ ಸಿ ್ಟ್ರೀಟ್, ಲಾಲ್ ಮಸೀದಿ ರಸ್ತೆಯಲ್ಲಿರುವ ಮನೆಯಲ್ಲಿ ಪ್ರತಿಷ್ಠಿತ ಟಾಟಾ ಕಂಪನಿಯ ಅಗ್ನಿ ಟೀ ಪುಡಿಯನ್ನು ನಕಲು ಮಾಡಿ ಸಾರ್ವಜನಿಕರಿಗೆ ಅಸಲಿ ಎಂದು ನಂಬಿಸಿ ಮಾರಾಟ ಮಾಡಿ ಹೆಚ್ಚಿನ ಹಣ ಸಂಪಾದನೆಯಲ್ಲಿ ತೊಡಗಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ಕಲೆ ಹಾಕಿದ್ದಾರೆ.
ಸರ್ಕಾರಕ್ಕೆ ಮತ್ತು ಪ್ರತಿಷಿ ್ಠತ ಕಂಪನಿಗೆ ನಷ್ಟವುಂಟು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿಯ ಅಧಿಕಾರಿಗಳು ಈ ಮನೆಯ ಮೇಲೆ ದಾಳಿ ಮಾಡಿ, ನಕಲಿ ಟೀ ಪುಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭದಲ್ಲಿ 1 ಕೆಜಿ ಮತ್ತು 250 ಗ್ರಾಂ ಪ್ಯಾಕೆಟ್‍ಗಳಿರುವ ಒಟ್ಟು 450 ಕೆ.ಜಿ ಟೀ ಪೌಡರನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 1.26 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.
ಈ ಸಂಬಂಧ ಆರೋಪಿ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕಾಪಿರೈಟ್ಸ್ ಆಕ್ಟ್ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಘಟಕದ ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಬೇಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ರಾಂಡ್ ಹೆಸರಿನಡಿ ನಕಲಿ ಬಟ್ಟೆ ಮಾರಾಟ: ಅಂಗಡಿ-ಗೋದಾಮು ಮೇಲೆ ಸಿಸಿಬಿ ದಾಳಿ
ಬೆಂಗಳೂರು,ನ.30-ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಕಂಪನಿಯ ಬ್ರಾಂಡ್ ಹೆಸರಿನಡಿ ನಕಲಿ ಬಟ್ಟೆಗಳನ್ನು ಮಾರುತ್ತಿದ್ದ ಅಂಗಡಿಗಳು ಹಾಗು ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಕೋಟ್ಯಂತರ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಹಕರಿಗೆ ಹೆಸರಾಂತ ಕಂಪನಿಗಳ ಬಟ್ಟೆಗಳೆಂದು ನಂಬಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೊಮ್ಮನಹಳ್ಳಿಯ ಪಟೇಲ್ ಎಕ್ಸ್‍ಪರ್ಟ್ ಮತ್ತು ಆರ್‍ಬಿ ಫ್ಯಾಷನ್ ಗೋದಾಮುಗಳ ಮೇಲೆ ದಾಳಿ ಮಾಡಿ ಕೋಟ್ಯಂತರ ರೂ. ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಪರಿಶೀಲನೆ ಸಂದರ್ಭದಲ್ಲಿ ಎಸ್.ಆರ್.ನಗರ, ಮಾಗಡಿ ರಸ್ತೆ, ಬೇಗೂರು ಸೇರಿದಂತೆ ಗೋದಾಮುಗಳಲ್ಲಿ ಪ್ರತಿಷ್ಟಿತ ಬ್ರಾಂಡ್ ಹೆಸರಿನಡಿ ನಕಲಿ ಬಟ್ಟೆಗಳನ್ನು ಸಿದ್ದಗೊಳಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.