Friday, November 22, 2024
Homeರಾಜ್ಯಹರಿಪ್ರಸಾದ್ ಜತೆ ಡಿಸಿಎಂ ಸಮಾಲೋಚನೆ : ಹೈಕಮಾಂಡ್ ಸಂದೇಶ ರವಾನೆ

ಹರಿಪ್ರಸಾದ್ ಜತೆ ಡಿಸಿಎಂ ಸಮಾಲೋಚನೆ : ಹೈಕಮಾಂಡ್ ಸಂದೇಶ ರವಾನೆ

ಬೆಂಗಳೂರು, ಸೆ.28- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಮಾಲೋಚನೆ ನಡೆಸಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್ ಅವರು, ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ ಹಾಗೂ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಮೂಲಗಳ ಪ್ರಕಾರ, ಹೈಕಮಾಂಡ್ ಕಳುಹಿಸಿರುವ ಸಂದೇಶವನ್ನು ಡಿ.ಕೆ.ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ರವಾನಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಮೂಡಿಸದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರಾಗಿದ್ದು, ಎಐಸಿಸಿಯಲ್ಲಿ ಸುದೀರ್ಘ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತವಾಗಿ ರಾಜ್ಯದಲ್ಲಿ ಅವರನ್ನು ವಿಧಾನಪರಿಷತ್‍ನ ಸದಸ್ಯರನ್ನಾಗಿ ನಿಯೋಜಿಸಲಾಗಿದೆ.

ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹರಿಪ್ರಸಾದ್ ವಿಧಾನಪರಿಷತ್‍ನ ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ ಹರಿಪ್ರಸಾದ್ ಅವರನ್ನು ಕಡೆಗಣಿಸಿ ಮಧು ಬಂಗಾರಪ್ಪ ಅವರಿಗೆ ಮಣೆ ಹಾಕಲಾಗಿದೆ ಎಂಬ ಆರೋಪಗಳಿವೆ.

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಹರಿಪ್ರಸಾದ್ ಅವರು ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅಷ್ಟಕ್ಕೆ ಸುಮ್ಮನಾಗದೆ ಹಲವಾರು ಬಾರಿ ತಮ್ಮ ಹೇಳಿಕೆಗಳನ್ನು ಅವರ ವಿರುದ್ಧ ಪುನರ್ ಉಚ್ಛರಿಸಿದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ

ಹೈಕಮಾಂಡ್ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಿ ಹತ್ತು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿತ್ತು. ಅದಕ್ಕೆ ಹರಿಪ್ರಸಾದ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದು ವದಂತಿಯ ಪ್ರಕಾರ ಬಿ.ಕೆ.ಹರಿಪ್ರಸಾದ್ ಉದ್ದೇಶಪೂರಕವಾಗಿಯೇ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಬಳಿಕ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಈ ತಯಾರಿಗಳು ನಡೆಯುತ್ತಿವೆ ಎಂಬ ಚರ್ಚೆಗಳಿದ್ದವು.

ನೋಟಿಸ್ ಬಳಿಕ ಹರಿಪ್ರಸಾದ್ ಅವರು ಮೌನಕ್ಕೆ ಶರಣಾಗಿದ್ದಾರೆ. ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.

RELATED ARTICLES

Latest News