ಬೆಂಗಳೂರು, ಡಿ. 2- ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಹೈದ್ರಾಬಾದ್‍ಗೆ ತೆರಳುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತೆಲಂಗಾಣ ನಮ್ಮ ನೆರೆಯ ರಾಜ್ಯ. ಅಲ್ಲಿನ ಚುನಾವಣೆಯ ಪ್ರಕ್ರಿಯೆಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ಗೆಲ್ಲುವ ವಿಶ್ವಾಸವಿದೆ. ನಾಳೆ ಫಲಿತಾಂಶ ಬಂದ ಬಳಿಕ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಬೇರೆ ಬೇರೆ ಪಕ್ಷದವರು ಪ್ರಯತ್ನ ನಡೆಸಿದ್ದಾರೆ. ಸಂಪರ್ಕಕ್ಕೆ ಒಳಗಾದ ಅಭ್ಯರ್ಥಿಗಳು ನಮಗೆ ಮಾಹಿತಿ ನೀಡಿದ್ದಾರೆ. ಯಾರು ಕೂಡ ಆಮಿಷಗಳಿಗೆ ಒಳಗಾಗುವುದಿಲ್ಲ. ಪಕ್ಷಾಂತರ ಮಾಡುವುದಿಲ್ಲ. ನಮಗೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.
ತೆಲಂಗಾಣದ ಶಾಸಕರನ್ನು ಸುರಕ್ಷಿತವಾಗಿಡಲು ರಾಜ್ಯದಲ್ಲಿ ರೆಸಾರ್ಟ್‍ಗಳನ್ನು ಕಾಯ್ದಿರಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು.
ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ
ಇಂದು ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇನೆ. 10 ದಿನ ಬೆಳಗಾವಿಯಲ್ಲಿ ವಿಧಾನಮಂಡಲ ಅವೇಶನವಿದೆ. ಅದರಲ್ಲಿ ಭಾಗವಹಿಸುತ್ತಿದ್ದೇನೆ. ಅಷ್ಟೂ ದಿನ ಕ್ಷೇತ್ರದ ಜನರ ಜೊತೆ ಮಾತನಾಡಲಾಗುವುದಿಲ್ಲ ಎಂಬ ಕಾರಣಕ್ಕೆ ಇಂದು ಜನಸಂಪರ್ಕ ಸಭೆ ನಡೆಸುವುದಾಗಿ ಹೇಳಿದರು.