Tuesday, April 21, 2026
Homeಜಿಲ್ಲಾ ಸುದ್ದಿಗಳುಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವು

ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವು

Newlywed couple dies after car collides with lorry

ಬೆಂಗಳೂರು,ಮಾ.1- ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿಯ ತಡಸ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್‌ ಹೂಗಾರ(34) ಮತ್ತು ಐಶ್ವರ್ಯ(30) ಮೃತಪಟ್ಟ ನವದಂಪತಿ. ಕಳೆದ 15 ದಿನಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ದೇವರ ದರ್ಶನಕ್ಕೆಂದು ದಂಪತಿ ಸೇರಿದಂತೆ ನಾಲ್ವರು ಕಾರಿನಲ್ಲಿ ಹೋಗಿ ತಡರಾತ್ರಿ ಹಿಂದಿರುಗುತ್ತಿದ್ದರು.

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಕಡಹಳ್ಳಿ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರ ಮಾರ್ಗದಲ್ಲಿ ಮುಂಜಾನೆ 5.40ರ ಸುಮಾರಿನಲ್ಲಿ ಬರುತ್ತಿದ್ದಾಗ ರಸ್ತೆಬದಿ ನಿಲ್ಲಿಸಿದ್ದ ಲಾರಿ ಗಮನಕ್ಕೆ ಬಾರದೆ ಕಾರು ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿ ಕಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ತಡಸ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನವದಂಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿದು ಅವರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Latest News