ಬೆಂಗಳೂರು,ಮಾ.1- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದಿದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಹಾಯವಾಣಿ ಸಂಖ್ಯೆ
ಇಸ್ರೇಲ್
+972-54-7520711
ಇರಾನ್
+989128109115, + 989128109109,
+989128109102, + 989932179359
ಸೌದಿ ಅರೆಬಿಯಾ
Riyadh 00-966-11-4884697, 00966-542126748( WhatsApp)
8002471234 (Toll-Free)
Landline: 00966126648660/00966122614093
Mobile: + 966556122301 / Toll-Free: 8002440003
Jeddaha: WhatsApp:+ 966536209704
ಯುಎಇ
Toll-Free: 800-46342
WhatsApp: + 971543090571
