ಬೆಂಗಳೂರು,ಡಿ.3- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಡಿ. 6ರಂದು ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಐಎನ್‍ಡಿಐಎ ಒಕ್ಕೂಟದ ನಾಯಕರ ಸಭೆ ಕರೆದಿರುವ ಮಲ್ಲಿಕಾರ್ಜುನ ಖರ್ಗೆಯವರು ಅಂದು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ತೀರಾ ಮುಖಭಂಗವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದತ್ತ ದಾಪುಗಾಲು ಇಟ್ಟಿದೆ. ಛತ್ತೀಸ್‍ಗಢದಲ್ಲಿ ಬಿಜೆಪಿ ಪ್ರಭಲ ಪೈಪೋಟಿ ನೀಡಿದೆ.
ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ
ಮುಂಬರುವ ಲೋಕಸಭೆ ಚುನಾವಣೆಗೆ ಈ ಚುನಾವಣಾ ಫಲಿತಾಂಶ ದಿಕ್ಸೂಚಿಯಂತೆ ಪರಿಗಣಿಸಲಾಗಿದ್ದು, ಪ್ರತಿಪಕ್ಷಗಳು ಪುಟಿದೇಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಖರ್ಗೆಯವರು ಡಿ. 6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದು, ಅಂದಿನ ಸಭೆ ಮಹತ್ವ ಪಡೆದುಕೊಂಡಿದೆ.