Monday, April 20, 2026
Homeರಾಜ್ಯಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಸುರಕ್ಷಿತವಾಗಿ ವಾಪಸ್ ಬರುತ್ತಾರೆ ; ಹೆಚ್ಡಿಕೆ

ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಸುರಕ್ಷಿತವಾಗಿ ವಾಪಸ್ ಬರುತ್ತಾರೆ ; ಹೆಚ್ಡಿಕೆ

Kannadigas will return safely from war-torn countries; HDK

ಮೈಸೂರು : ಕೊಲ್ಲಿ ಪ್ರದೇಶದಲ್ಲಿ ಉಂಟಾಗಿರುವ ಉದ್ವಿಗ್ನತೆಯಲ್ಲಿ ಸಿಲುಕಿಕೊಂಡಿರುವ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕೇಂದ್ರ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು; ಈ ಹಿಂದೆ ಇಂಥದೇ ಅನೇಕ ಸಂದರ್ಭಗಳಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿತ್ತು. ಈ ಬಾರಿಯೂ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆ ತರಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಪ್ರಧಾನಿಗಳು ಕ್ರಮ ವಹಿಸಿದ್ದಾರೆ ಎಂದು ಹೇಳಿದರು.

ನಾನು ಕೂಡ ದುಬೈ ಸೇರಿದಂತೆ ಯುದ್ಧ ಕಾರ್ಮೋಡ ಇರುವ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸಂಪರ್ಕಿಸಿದ್ದೇನೆ. ಎಲ್ಲರೂ ಸುರಕ್ಷಿತರಾಗಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿ ವಾಪಸ್ ಬರಲಿದ್ದಾರೆ. ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.

RELATED ARTICLES

Latest News