Friday, November 22, 2024
Homeರಾಜ್ಯಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ

ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ

ಬೆಳಗಾವಿ,ಡಿ.4 -ಅತಿಥಿ ಉಪನ್ಯಾಸಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಸರ್ಕಾರ ನಡೆದುಕೊಳ್ಳಬೇಕು. ಗೌರವಧನದ ಹೊರತು ಖಾಯಮ್ಮಾತಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯದ ತೀರ್ಪು ನೋಡಿಕೊಂಡು ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗುವುದು. ಇದರ ಸಾಧಕ-ಬಾಧಕಗಳ ಬಗ್ಗೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ಆದೇಶಕ್ಕೆ ನಾವು ವಿರುದ್ಧವಾಗಿ ನಡೆದುಕೊಳ್ಳಲು ಆಗುವುದಿಲ್ಲ ಎಂದರು.

ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ನೇಮಿಸಿಕೊಳ್ಳುತ್ತಾರೆ. 9 ತಿಂಗಳಿಗೆ ಮಾತ್ರ ಇವರ ಸೇವೆಯನ್ನು ಬಳಸಿಕೊಳ್ಳಲಾಗುತ್ತದೆ. ಪ್ರತಿಯೊಬ್ಬರಿಗೂ ಮಾಸಿಕವಾಗಿ 12 ಸಾವಿರ ಗೌರವಧನವನ್ನು ನೀಡುತ್ತೇವೆ. ತಾತ್ಕಾಲಿಕ ನೌಕರರಾಗಿರುವುದರಿಂದ ಅವರ ಸೇವೆಯನ್ನು ಖಾಯಂಗೊಳಿಸಲು ಬರುವುದಿಲ್ಲ. ಸದಸ್ಯರ ಕೋರಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಆಶ್ವಾಸನೆ ಕೊಟ್ಟರು.

RELATED ARTICLES

Latest News