Saturday, November 23, 2024
Homeರಾಜ್ಯಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ

ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ

ಬೆಳಗಾವಿ,ಡಿ.4- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಣ ಇಲಾಖೆಯ ಹುದ್ದೆಗಳನ್ನು ಹಣಕಾಸಿನ ಲಭ್ಯತೆ ಆಧಾರದ ಮೇಲೆ ಹಂತ ಹಂತವಾಗಿ ತ್ವರಿತವಾಗಿ ನೇಮಕ ಮಾಡುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಶಾಲೆಗಳಲ್ಲಿ 45,535 ಪ್ರಾಥಮಿಕ ಶಿಕ್ಷಕರು, 11,724 ಪ್ರೌಢಶಾಲೆ ಶಿಕ್ಷಕರು, 1369 ಗ್ರೂಪ್ ಡಿ ನೌಕರರು, 3,323 ಬೋಧಕೇತರ ಸಿಬ್ಬಂದಿ ಸೇರಿದಂತೆ 61,891 ಸಿಬ್ಬಂಯವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವು ಪ್ರಮುಖ ಹುದ್ದೆಗಳು ಭರ್ತಿ ಮಾಡಬೇಕಾಗಿದೆ. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಕಾಲೇಜುಗಳವರೆಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.
ನಮ್ಮ ಸರ್ಕಾರ ಒಟ್ಟು 16 ಸಾವಿರ ಶಿಕ್ಷಕರನ್ನು ಖಾಯಂ ಮಾಡಿದೆ.

ಇದರಲ್ಲಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದ್ದೇವೆ ಎಂದು ಸಚಿವರು ಹೇಳುತ್ತಿದ್ದಂತೆ ಅಸಮಾಧಾನಗೊಂಡ ಸದಸ್ಯ ಶಶಿಲ್ ನಮೋಶಿ, ಮಂಡ್ಯ, ಮೈಸೂರು ಭಾಗಗಳಲ್ಲಿ 12-13 ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಒಬ್ಬ ಶಿಕ್ಷಕರನ್ನು ಕೊಡುತ್ತೀರಿ, ಮೈಸೂರು ಭಾಗದ ವ್ಯವಸ್ಥೆಯು ಕಲ್ಯಾಣ ಕರ್ನಾಟಕಕ್ಕೂ ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಲು ಬದ್ದವಾಗಿದೆ ಎಂದು ಸಚಿವ ಕುಮಾರ ಬಂಗಾರಪ್ಪ ಆಶ್ವಾಸನೆ ನೀಡಿದರು.

RELATED ARTICLES

Latest News