ಬೆಂಗಳೂರು, ಡಿ.6- ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈ ಪ್ರಕರಣದಲ್ಲಿ ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ, ಯಾರ್ಯಾರು ಈ ಪ್ರಕರಣಕ್ಕೆ ಕಾರಣಕರ್ತರಾಗಿದ್ದಾರೆಯೋ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಇಸ್ರೇಲ್ ಮಹಿಳೆಯರ ಮೇಲೆ ಹಮಾಸ್ ಉಗ್ರರ ಲೈಂಗಿಕ ಅಟ್ಟಹಾಸ : ಬಿಡೆನ್ ಖಂಡನೆ
ಅರ್ಜನ ಸಾವಿನ ವರದಿ ನೀಡಲು ಸೂಚನೆ :
ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು. ಆದರೆ ಆನೆ ಕಾರ್ಯಾಚರಣೆಗೆ ಅರ್ಜುನನನ್ನು ಉಪಯೋಗಿಸಿದ ಕಾರಣದಿಂದ ಸಾವನ್ನಪ್ಪಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದೆಯೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹೆಗ್ಗಡದೇವನಕೋಟೆಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು.
ಡಾಲಿ ಧನಂಜಯ ಲಿಡ್ಕರ್ ರಾಯಭಾರಿ: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ ಅವರನ್ನು ರಾಯಭಾರಿಯಾಗಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು. ಧನಂಜಯ್ಯ ಅವರು ಉದಯೋನ್ಮುಖ ನಟ. ಸಾಮಾಜಿಕ ಕಳಕಳಿ ಇರುವ ನಟ. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಉಚಿತವಾಗಿ ರಾಯಬಾರಿ ಕೆಲಸ ಮಾಡಲಿದ್ದಾರೆ. ಇದರಿಂದಾಗಿ ಚರ್ಮೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು.
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಅಭಿಪ್ರಾಯ ಸಂಗ್ರಹಿಸಿದ್ದು, ರೇವಂತ್ ರೆಡ್ಡಿ ಅವರಿಗೆ ಬಹುಮತ ಇದೆಯೆಂದು ಆಯ್ಕೆ ಮಾಡಿದ್ದಾರೆ. ನಾವು ಅಲ್ಲಿ ಆರು ಗ್ಯಾರಂಟಿ ಭರವಸೆಗಳನ್ನು ಕೊಟ್ಟಿದ್ದೇವೆ. ಕಾಂಗ್ರೆಸ್ ಮತ್ತು ನಮ್ಮ ನಾಯಕರ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಕೊಟ್ಟ ಮಾತಿನಂತೆ ನಂಬಿಕೆ ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದು ಅವರು ಹೇಳಿದರು.
ರಾಯಬಾರಿಯಾಗಿರುವುದು ಖುಷಿ ತಂದಿದೆ: ರಾಯಬಾರಿಯಾದ ಬಳಿಕ ನಟ ಡಾಲಿ ಧನಂಜಯ ಮಾತನಾಡಿ, ಮೊದಲನೇ ಬಾರಿಗೆ ರಾಯಬಾರಿ ಆಗಿರುವುದು ಖುಷಿ ಇದೆ. ಅದೂ ಕೂಡ ಲಿಡ್ಕರ್‍ಗೆ ರಾಯಭಾರಿ ಆಗುತ್ತಿರುವುದು ಇನ್ನೂ ಹೆಚ್ಚಿನ ಖುಷಿಯಾಗುತ್ತಿದೆ. ಸುಮಾರು 50 ಸಾವಿರ ಕುಟುಂಬಗಳು ಈ ಉದ್ಯಮದಲ್ಲಿವೆ. ಲಿಡ್ಕರ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ಅವರ ಭಾವಚಿತ್ರ ಹಾಕಿದ್ದರು. ನಮ್ಮ ಕರ್ನಾಟಕದಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ ಎಂದರು.
ಮಳೆ ಹಾನಿ : 5060 ಕೋಟಿ ರೂ. ಪರಿಹಾರಕ್ಕೆ ತಮಿಳುನಾಡು ಮನವಿ
ಇದು ಸರ್ಕಾರದಿಂದಲೇ ಮಾಡಿರುವಂತಹ ಉತ್ಪನ್ನ. ಇದರಿಂದ ಏನೇ ಬಂದರೂ ಅಷ್ಟೂ ಕುಟುಂಬಗಳಿಗೆ ಹೋಗುತ್ತದೆ. ಈ ಸಂಸ್ಥೆಗೆ ನನ್ನನ್ನು ರಾಯಭಾರಿಯಾಗಿ ಮಾಡಿದ್ದು ಖುಷಿ ಇದೆ. ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ಬಗ್ಗೆ ಹೇಳಿದ್ದರು. ನಂದಿನಿ, ಮೈಸೂರ್ ಸಿಲ್ಕ, ಮೈಸೂರ್ ಸ್ಯಾಂಡಲ್, ಲಿಡ್ಕರ್ ಇವು ನಮ್ಮದೇ ಉದ್ಯಮ. ಇದು ಮೇಡ್ ಇನ್ ಕರ್ನಾಟಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಮಾಜಿ ಸಚಿವ ಎಚ್. ಆಂಜನೇಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.