ಬೆಂಗಳೂರು,ಡಿ.5- ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲು ಚಿಂತನೆ ನಡೆಸಿದೆ.ಭ್ರೂಣಹತ್ಯೆ ಮಾಡಿದರೆ ಐಪಿಸಿ ಸೆಕ್ಷನ್ 302 ಅಡಿ (ಕೊಲೆ) ಪ್ರಕರಣ ದಾಖಲಿಸಿಕೊಳ್ಳಲು ಚರ್ಚೆ ನಡೆಸಲಾಗುತ್ತಿದೆ.ಈ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದು, ಕೊಲೆ ಪ್ರಕರಣ ದಾಖಲಿಸಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ.
ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸದ್ದು ಮಾಡಿದ್ದು, ಭೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಭ್ರೂಣಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ವೈದ್ಯರು, ನರ್ಸ್ಗಳು ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.ಮೈಸೂರಿನ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಪರಿಶೀಲಿಸಲಾಗಿದೆ.
ಮೈಸೂರು-ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರಿ ಜಾಲವನ್ನೇ ಪೊಲಿಸರು
ಬೇಸಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಹೊಸ ಚಿಂತನೆ ನಡೆಸಿದೆ. ಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆದಿರುವುದು ಬೆಳಕಿಗೆ ಬರುತ್ತಿದ್ದಂತೆ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಈ ಬಗ್ಗೆ ಸಿಐಡಿ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಆರು ತಿಂಗಳು ಮತ್ತು ನಂತರದ ಭ್ರೂಣಹತ್ಯೆ ಮಾಡಿದರೆ ಕೊಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.
ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ
ಸ್ಕ್ಯಾನಿಂಗ್ ಸೆಂಟರ್ಗಳ ತಪಾಸಣೆ ?:
ಬೆಂಗಳೂರು,ಡಿ.6- ಭ್ರೂಣ ಲಿಂಗ ಪತ್ತೆ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಮಾಹಿತಿ ಪಡೆಯಲು ತೀರ್ಮಾನಿಸಿದೆ. ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ಡಿಟೈಲ್ ರಿಪೊರ್ಟ್ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿರುವುದರಿಂದ ಭ್ರೂಣ ಲಿಂಗ ಪತ್ತೆ ಮಾಡಿರುವ ಸೆಂಟರ್ಗಳ ವೈದ್ಯರಿಗೆ ಡವ ಡವ ಶುರುವಾಗಿದೆ.
ರಾಜ್ಯದ 6000 ಸಾವಿರ ಸ್ಕ್ಯಾನಿಂಗ್ ಸೆಂಟರ್ ಹಾಗೂ ಕ್ಲಿನಿಕ್ಗಳ ತಪಾಸಣೆಗೆ ಹಾಗೂ ಕಾರ್ಯಾಚರಣೆ ಬೆಂಗಳೂರು ಸೇರಿದಂತೆ ರಾಜ್ಯದ ಸೆಂಟರ್ಗಳಲ್ಲಿರುವ ಯಂತ್ರೋಪಕರಣಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.ರಾಜ್ಯದಲ್ಲಿರುವ 6000 ಸ್ಕ್ಯಾನಿಂಗ್ ಸೆಂಟರ್ ನಲ್ಲಿರುವ ಎಲ್ಲ ಮಷಿನಗಳನ್ನ ತಪಾಷಣೆ ಮಾಡಬೇಕು ಅಲ್ಲಿರುವ ನ್ಯೂನೆತಗಳನ್ನ ಪರಿಶೀಲನೆ ಮಾಡಬೇಕು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಕಂಡು ಬಂದ್ರೆ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 30 ರೊಳಗೆ ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ನ್ಯೂನೆತೆ ಹಾಗೂ ಎಷ್ಟು ಸ್ಕ್ಯಾನಿಂಗ್ ಮಾಡಲಾಗಿದೆ ಎಂಬುದರ ಬಗ್ಗೆ ಸ್ಕ್ಯಾನಿಂಗ್ ಮಷಿನ್ ಗಳ ಡಾಟಾ ಇಮೇಜ್ ಸಂಗ್ರಹಿಸುವಂತೆ ಸೂಚನೆ ನೀಡಿದೆ. ಅನುಮತಿ ಪಡೆಯದಿರುವ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಮಾರ್ಗಸೂಚಿ ಅನ್ವಯ ಸ್ಕ್ಯಾನಿಂಗ್ ನಡೆಸಲಾಗುತ್ತಿದೆಯೇ? ಪಾಲಕರು, ತಾಯಿ ಹೊರತು ಅನ್ಯ ವ್ಯಕ್ತಿಗಳ ಪತ್ತೆಗಾಗಿ ಅಲ್ಲಿಯ ಸಿಸಿ ಕ್ಯಾಮರಾ ಪರಿಶೀಲನೆ ಮಾಡಬೇಕು ಇಮೇಜ್ ಡಾಟಾ ಹಾಗೂ ಸ್ಕ್ಯಾನಿಂಗ್ ಹಿಸ್ಟರಿ ದತ್ತಾಂಶ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭ್ರೂಣ ಲಿಂಗ್ ಪತ್ತೆ ವಿರುದ್ಧ ದೊಡ್ಡ ಭೇಟೆಯನ್ನ ಆರೋಗ್ಯ ಇಲಾಖೆ ಶುರು ಮಾಡಿರುವುದು ಮಾತ್ರ ಆರೋಗ್ಯಕರ ಬೆಳವಣಿಗೆಯಾಗಿದೆ.