ಬೆಂಗಳೂರು, ಡಿ. 7- ಮಾದಕ ವಸ್ತು ಕೊಕೈನ್‍ನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 57 ಸಾವಿರ ನಗದೂ ಸೇರಿದಂತೆ ಐದು ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ವಡೇರಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿದೇಶಿ ಪ್ರಜೆಗಳು ನಿಷೇದಿತ ಮಾದಕ ವಸ್ತು ಕೊಕೈನ್‍ನನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.
ತಕ್ಷಣ ಪೊಲೀಸರು ಮನೆ ಮೇಲೆ ದಾಳಿ ಮಾಡಿ ನೈಜೀರಿಯಾ ಪ್ರಜೆಯನ್ನು ಬಂಧಿಸಿ 23 ಗ್ರಾಂ ತೂಕದ ಕೊಕೈನ್ 238 ಗ್ರಾಂ ತೂಕದ ಕೊಕೈನ್ ಮಾದರಿಯ ಸಿಂಥೆಟಿಕ್ ಮಾದಕ ವಸ್ತು, 57 ಸಾವಿರ ನಗದು, 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆತನ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ
ಈಶಾನ್ಯ ವಿಭಾಗದ ಉಪಪೊಲೀಸ್ ಆಯುಕ್ತರಾದ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಯಲಹಂಕ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ನರಸಿಂಹ ಮೂರ್ತಿ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಶಿವಸ್ವಾಮಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.