Wednesday, April 29, 2026
Homeಇದೀಗ ಬಂದ ಸುದ್ದಿವಿವಿಧ ವಿವಿಗಳಲ್ಲಿ ಖಾಲಿ ಇರುವ 1 ಸಾವಿರ ವಿವಿ ಬೋಧಕರ ನೇಮಕಾತಿ

ವಿವಿಧ ವಿವಿಗಳಲ್ಲಿ ಖಾಲಿ ಇರುವ 1 ಸಾವಿರ ವಿವಿ ಬೋಧಕರ ನೇಮಕಾತಿ

Recruitment of 1,000 vacant university lecturers in various universities

ಬೆಂಗಳೂರು,ಮಾ.9- ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ವಿಧಾನಪರಿಷತ್‌ಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಹುದ್ದೆ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ ವಿವಿಗಳ ಕುಲಪತಿಗಳ ಜೊತೆ ಚರ್ಚಿಸಿ ಅಗತ್ಯವಿರುವ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಲೇಜು ಶಿಕ್ಷಣ ವ್ಯಾಪ್ತಿಯ 826 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಜಾಗತಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳ ಕಲಿಕಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ರಮೇಶ್‌ ಬಾಬು ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಡಿಜಿಟಲ್‌ ಕಲಿಕೆ, ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ, ಕಲಿಕೆ ಜೊತೆ ಕೌಶಲ್ಯ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

RELATED ARTICLES

Latest News