Homeಜಿಲ್ಲಾ ಸುದ್ದಿಗಳುಬೀದರ್‌ : ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್‌ : ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Bidar: Student commits suicide by jumping from school building

ಬೀದರ್‌,ಮಾ.12- ಪ್ರೀತಿಸುವಂತೆ ಸಹಪಾಠಿ ವಿದ್ಯಾರ್ಥಿಯೊಬ್ಬ ಪೀಡಿಸಿದ ಹಿನ್ನಲೆಯಲ್ಲಿ ನೊಂದ ವಿದ್ಯಾರ್ಥಿನಿ ಶಾಲೆಯ ಮಹಡಿ ಮೇಲಿಂದ ಜಿಗಿದು ಆತಹತ್ಯೆ ಮಾಡಿಕೊಂಡ ದಾರುಣ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮದಿಯಾ ನಶೀರ್‌ ಪಾಷಾ (16) ಆತಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವ ಆಕೆಗೆ ಸಹಪಾಠಿ ಪ್ರೀತಿ ಮಾಡುವಂತೆ ಒತ್ತಡ ಹಾಕಿ ಚುಡಾಯಿಸುತ್ತಿದ್ದ.

ಈ ದೃಶ್ಯಸಿಸಿಟಿವಿಯಲ್ಲಿ ಸೆರೆಯಾಗಿದೆ ಆದರೂ ಈವರೆಗೂ ವಿದ್ಯಾರ್ಥಿನಿ ಆತಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಮದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

RELATED ARTICLES
spot_img

Latest News