Wednesday, December 3, 2025
Homeಬೆಂಗಳೂರುಮಾದಕ, ಸೈಬರ್‌ ಅಪರಾಧ ಕುರಿತು ವಿದ್ಯಾರ್ಥಿಗಳಿಗೆ ಪೊಲೀಸರಿಂದ ಜಾಗೃತಿ

ಮಾದಕ, ಸೈಬರ್‌ ಅಪರಾಧ ಕುರಿತು ವಿದ್ಯಾರ್ಥಿಗಳಿಗೆ ಪೊಲೀಸರಿಂದ ಜಾಗೃತಿ

Police raise awareness among students on drugs, cybercrime

ಬೆಂಗಳೂರು,ಡಿ.1- ಮಹಿಳೆಯರ ಸುರಕ್ಷತೆ, ಮಾದಕ ವ್ಯಸನದ ನಿಯಂತ್ರಣ, ಸೈಬರ್‌ ಅಪರಾಧಗಳ ತಡೆ ಮತ್ತು ಸಂಚಾರ ನಿರ್ವಹಣೆ ಕುರಿತು ನಗರದ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲು ಇಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಬ್‌ಇನ್‌್ಸಪೆಕ್ಟರ್‌ ಸೇರಿದಂತೆ ಆಯುಕ್ತರವರೆಗೂ ನಗರದ ಎಲ್ಲಾ ರ್ಯಾಂಕ್‌ನ ಅಽಕಾರಿಗಳು ಸೇರಿದಂತೆ 750 ಪೊಲೀಸ್‌ ಅಽಕಾರಿಗಳು, ಸಿಬ್ಬಂದಿಗಳು ನಗರದ 1250 ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸುಮಾರು 2.5 ಲಕ್ಷ ವಿದ್ಯಾರ್ಥಿಗಳಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಯಿತು ಎಂದರು.

ಮಹಿಳೆಯರ ಸುರಕ್ಷತೆಗಾಗಿ ಸಹಾಯವಾಣಿ 1090 ಸಂಪರ್ಕಿಸಬಹುದಾಗಿದೆ. ಹೊಯ್ಸಳ ವಾಹನಗಳ ಗಸ್ತು ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.
ವಿದ್ಯಾರ್ಥಿಗಳಿಗೆ ಸಂಚಾರ ನಿಯಮ ಪಾಲನೆ, ಮಾದಕ ವ್ಯಸನದಂತಹ ದುಶ್ಚಟಗಳಿಂದ ದೂರವಿರುವಂತೆ ಅರಿವು ಮೂಡಿಸಲಾಯಿತು. ಯಾವುದೇ ರೀತಿಯ ದೂರುಗಳು ಸಲ್ಲಿಸಲು ಮತ್ತು ಪೊಲೀಸ್‌ ಸೇವೆಗಳನ್ನು ಬಳಸಿಕೊಳ್ಳಲು ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.

ಬೆಂಗಳೂರು ನಗರ ಪೊಲೀಸರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದರ ಜೊತೆಗೆ ತಂತ್ರಜ್ಞಾನ ಆಧಾರಿತ ಪೊಲೀಸ್‌ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ನಾಗರಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ತಮ್ಮ ಅಚಲವಾದ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಾರೆ.

ನಗರದ ಸಾರ್ವಜನಿಕರು ಈ ಆಧುನಿಕ ತಂತ್ರಜ್ಞಾನ ಆಧಾರಿತ ಸುರಕ್ಷತಾ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸುರಕ್ಷಿತ ಸಮಾಜ ನಿರ್ಮಾಣಕ್ಕಾಗಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

RELATED ARTICLES

Latest News