Friday, November 22, 2024
Homeರಾಜ್ಯರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಕೆಗೆ ನಿರ್ಧರಿಸಿಲ್ಲ : ಖಂಡ್ರೆ

ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಕೆಗೆ ನಿರ್ಧರಿಸಿಲ್ಲ : ಖಂಡ್ರೆ

ಬೆಳಗಾವಿ, ಡಿ.11-ಆನೆ ಸೇರಿದಂತೆ ವನ್ಯ ಜೀವಿಗಳ ದಾಳಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿಯನ್ನು ಅಳವಡಿಸಲು ಸದ್ಯಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತಾರಣ್ಯಗಳಲ್ಲಿ ಕೆರೆಗಳ ನಿರ್ಮಾಣ ಹಾಗೂ ಪುನಶ್ಚೇತನ ಗೊಳಿಸಿ ವನ್ಯಪ್ರಾಣಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಕಾಡಾನೆ ಹಾಗೂ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬಾರದಂತೆ ತಡೆಯಲಾಗುತ್ತಿದೆ ಎಂದರು.

ಅರಣ್ಯ ಪ್ರದೇಶಗಳಲ್ಲಿ ಹುಲ್ಲುಗಾವಲು ಸಂರಕ್ಷಣೆ ಹಾಗೂ ಅಭಿವೃದ್ಧಿಗೊಳಿಸಲು ಹೆಚ್ಚಿನ ಅರಣ್ಯ ಪ್ರದೇಶಗಳಲ್ಲಿ ದಟ್ಟವಾಗಿ ಬೆಳೆದ ಲಂಟಾನ ಮತ್ತು ಯುಪಟೋರಿಯಂ ಕಳೆಗಳಿಂದಾಗಿ ಹುಲ್ಲಿನ ಬೆಳವಣಿಗೆಗೆ ತೀವು ಅಡಚಣೆಯಾಗಿದೆ. ಅರಣ್ಯದಲ್ಲಿ ಹುಲ್ಲಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಹುಲ್ಲು ಬೆಳೆಯುವ ಪ್ರದೇಶಗಳಲ್ಲಿ ಬೆಳದಿರುವ ಲಂಟಾನ ಮತ್ತು ಯುಪಟೋರಿಯಂ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸಿ ಅರಣ್ಯಕ್ಕೆ ಪೂರಕವಾದ ಹುಲ್ಲು ಬೆಳೆಯಲು ಅನುವು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆ ಏರಿಕೆ

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ, ನಿರ್ವಹಣೆ, ಆನೆ ಕಂದಕ ನಿರ್ಮಾಣ, ನಿರ್ವಹಣೆ ಮಾಡಲಾಗಿದ್ದು, ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಅದೇ ರೀತಿ, ಕಾಡಾನೆ ಹಾವಳಿ ತುರ್ತು ನಿರ್ವಹಣೆಗಾಗಿ ಕ್ಷಿಪ್ರ ಕಾರ್ಯಪಡೆ ತಂಡಗಳನ್ನು ರಚಿಸಿ ನಿರ್ವಹಿಸಲಾಗುತ್ತಿದೆ. ಕಾಡಾನೆ ಹಿಮ್ಮೆಟ್ಟಿಸುವ ತಂಡಗಳನ್ನು ರಚಿಸಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

RELATED ARTICLES

Latest News