Thursday, April 30, 2026
Homeಬೆಂಗಳೂರುನಿಷೇಧಿತ ಪ್ಲಾಸ್ಟಿಕ್‌ ಬಳಕೆ ಪ್ರಕರಣಗಳಲ್ಲಿ 78.50 ಲಕ್ಷ ದಂಡ ವಸೂಲಿ

ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಪ್ರಕರಣಗಳಲ್ಲಿ 78.50 ಲಕ್ಷ ದಂಡ ವಸೂಲಿ

Fines of Rs 78.50 lakh collected in cases of banned plastic usage

ಬೆಂಗಳೂರು, ಮಾ.16- ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದನೆ, ಮಾರಾಟ ಹಾಗೂ ಬಳಕೆ ಮತ್ತು ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಒಟ್ಟು 11,694 ಪ್ರಕರಣಗಳಲ್ಲಿ ರೂ.78.50 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್‌ ತಿಳಿಸಿದ್ದಾರೆ.

ಸೆಪ್ಟೆಂಬರ್‌ 2025ರಿಂದ ಇದುವರೆಗೆ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದನೆ, ಮಾರಾಟ ಮತ್ತು ಬಳಕೆ ಮಾಡಿದ ಅಂಗಡಿ ಮುಂಗಟ್ಟುಗಳು ಹಾಗೂ ವ್ಯಾಪಾರಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, 7,047 ಪ್ರಕರಣಗಳಲ್ಲಿ ರೂ.54.69 ಲಕ್ಷ ದಂಡ ವಿಧಿಸಲಾಗಿದೆ.ಇದೇ ವೇಳೆ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸಿದ 4,647 ಪ್ರಕರಣಗಳಲ್ಲಿ ರೂ.30.64 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ನಗರ ನೈರ್ಮಲ್ಯ ಕಾಪಾಡುವುದು ನಗರ ಪಾಲಿಕೆಯ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕರು, ಹೋಟೆಲ್‌ಗಳು, ವ್ಯಾಪಾರಸ್ಥರು ಹಾಗೂ ಬಲ್‌್ಕ ತ್ಯಾಜ್ಯ ಉತ್ಪಾದಕರು ತ್ಯಾಜ್ಯವನ್ನು ವಿಂಗಡಣೆ ಮಾಡದೇ ರಸ್ತೆ ಬದಿ ಎಲ್ಲೆಂದರಲ್ಲಿ ಎಸೆಯುತ್ತಿರುವುದು ಕಂಡುಬರುತ್ತಿದೆ. ಇದರಿಂದ ನಗರದಲ್ಲಿ ಬ್ಲ್ಯಾಕ್‌ ಸ್ಪಾಟ್‌ಗಳು ನಿರ್ಮಾಣವಾಗಿ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೂಲಕ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಮನೆಗಳಿಗೆ ಬರುವ ಆಟೋ ಟಿಪ್ಪರ್‌ಗಳಿಗೆ ಒಣ ಮತ್ತು ತೇವ ತ್ಯಾಜ್ಯವನ್ನು ವಿಂಗಡಣೆ ಮಾಡಿ ನೀಡುವಂತೆ ಮನವಿ ಮಾಡಲಾಗಿದೆ.

ಜೊತೆಗೆ ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಹೋಟೆಲ್‌ ಮಾಲೀಕರು ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಮಾರಾಟ ಹಾಗೂ ಬಳಕೆ ಮಾಡದಂತೆ ಸೂಚಿಸಲಾಗಿದೆ.ಇದೇ ವೇಳೆ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದನೆ ಮಾಡದಂತೆ ಉತ್ಪಾದಕರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

RELATED ARTICLES

Latest News