Friday, May 17, 2024
Homeರಾಜ್ಯಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ

ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ

ಬೆಳಗಾವಿ,ಡಿ.13- ಕಾಂಗ್ರೆಸ್ ಜಾತಿ ಗಣತಿ ವಿಚಾರ ವಾಗಿ ಎಐಸಿಸಿ ಅಧ್ಯಕ್ಷರು ಒಂದು ರೀತಿ ಹೇಳಿಕೆ ಕೊಟ್ಟರೆ ಅದಕ್ಕೆ ವಿರುದ್ಧವಾಗಿ ಕೆಪಿಸಿಸಿ ಅಧ್ಯಕ್ಷರು ಮತ್ತೊಂದು ಹೇಳಿಕೆ ಕೊಡುತ್ತಾರೆ. ಹೀಗಾಗಿ ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಜಾತಿಗಣತಿಗೆ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷರೇ ವಿರೋಧ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು, ನಾನು ವಿರೋಧ ವ್ಯಕ್ತಪಡಿಸಿಲ್ಲ. ವೈಜ್ಞಾನಿಕವಾಗಿ ನಡೆಯಬೇಕು ಎಂದಿದ್ದೆ ಎನ್ನುತ್ತಾರೆ. ಹೀಗೆ ವರದಿ ಬಗ್ಗೆಯೇ ಎಐಸಿಸಿ ಅಧ್ಯಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವೇ ಗೊಂದಲಗಳಿರುವುದರಿಂದ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದರು.
ಜನ ಸಂಕಷ್ಟದಲ್ಲಿದ್ದಾರೆ. ಬರ ಇದೆ. ಸರ್ಕಾರದಿಂದ ಪರಿಹಾರದ ಮಾತೇ ಇಲ್ಲ ರೈತರ ಸಾಲ ಮನ್ನಾ ಮಾಡುತ್ತಾರೆರೈತರ ಬೆಳೆ ಪರಿಹಾರ 25 ಸಾವಿರ ಕೊಡ್ತಾರೆ ಎಂದುನಾವೆಲ್ಲಾ ಕಾತುರದಿಂದ ಕಾಯುತ್ತಿದ್ದೆವು. ಅವೇಶನದಲ್ಲಿ ಉತ್ತರ ಕೊಡಲಿಲ್ಲ. ಅವೇಶನ ಕರೆದಿರುವುದು ಯಾಕೆ? ಎಂದು ಪ್ರಶ್ನಿಸಿದರು.

BIG NEWS : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..!

ಉತ್ತರ ಕರ್ನಾಟಕ ಸಮಸ್ಯೆ ಪರಿಹಾರ ಕಂಡುಕೊಳ್ಳಲು, ಸ್ಟ್ಯಾಂಪ್ ಬೆಲೆ ಹೆಚ್ಚಳ ಮಾಡೋಕೆ, ಮನೆಗಳ ತೆರಿಗೆ ಹೆಚ್ಚಳ ಮಾಡೋಕೆ ಅವೇಶನ ಕರೆದಿದ್ದಾರೆ. ಈ ಸರ್ಕಾರಕ್ಕೆ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಪೊಲೀಸರೇ ರೈತರ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ ಇದನ್ನು ಯಾರೂ ಕೇಳೋರು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ, ತೆರಿಗೆ ಹೆಚ್ಚಳ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹದಿನೈದು ಸಾವಿರ ಜನ ಸೇರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಇಂದು ಸದನದಲ್ಲಿ ಪ್ರಮುಖ ವಿಚಾರ ಚರ್ಚೆ ಮಾಡುತ್ತೇವೆ, ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದು, ಚಿಕ್ಕಮಗಳೂರು ವಕೀಲರ ಗಲಾಟೆ, ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ, ಕೋಲಾರದಲ್ಲಿ ತಲ್ವಾರ್ ಹಾಕಿರುವುದು ಇದನ್ನೆಲ್ಲಾ ಖಂಡಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು. ಜೆಡಿಎಸ್ ಮತ್ತು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

RELATED ARTICLES

Latest News