ಬೆಂಗಳೂರು,ಡಿ.13- ದುಬೈನಿಂದ ವಿಮಾನದಲ್ಲಿ ಚಿನ್ನವನ್ನು ಒಳ ಉಡುಪಿನಲ್ಲಿ ಬಚ್ಚಿಕೊಂಡು ಕಳ್ಳಸಾಗಾಣೆ ಮಾಡಿಕೊಂಡು ಬಂದಿದ್ದ ಕೊಡುಗು ಮೂಲದ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 55 ಲಕ್ಷ ಮೌಲ್ಯದ 907 ಗ್ರಾಂ ಚಿನ್ನದ ಪೇಸ್ಟ್ನ್ನು ವಶಪಡಿಸಿಕೊಂಡಿದ್ದಾರೆ.
ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಮೂರು ದಿನಗಳ ಹಿಂದೆ ಈ ಯುವಕ ದುಬೈನಿಂದ ಬೆಂಗಳೂರಿಗೆ ಬಂದಿದ್ದಾನೆ. ಆ ವೇಳೆ ಕಸ್ಟಮ್ ಅಧಿಕಾರಿಗಳು ಲಗೇಜ್ ತಪಾಸಣೆ ವೇಳೆ ಅಸಹಜ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಗಮನಿಸಿ ಅನುಮಾನಗೊಂಡು ಆತ ಧರಿಸಿದ್ದ ಜೀನ್ಸ್ ಪ್ಯಾಂಟ್ನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ.
BIG NEWS : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..!
ಆ ವೇಳೆ ಜೀನ್ಸ್ ಸೊಂಟದ ಭಾಗದಲ್ಲಿ ಸಣ್ಣ ಸಣ್ಣ ಚೀಲಗಳು ಕಂಡುಬಂದಿದ್ದು, ಅದನ್ನು ಪರಿಶೀಲಿಸಿ ದಾಗ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಜೀನ್ಸ್ ಹಾಗೂ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಚಿನ್ನದ ಪೇಸ್ಟ್ ಸಾಗಿಸುತ್ತಿದ್ದ ಆರೋಪದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಈ ಯುವಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.