ಬೆಳಗಾವಿ, ಡಿ.14- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಇದಕ್ಕೆ ಲಭ್ಯವಿರುವ ಅಂಕಿ-ಅಂಶಗಳೇ ಸಾಕ್ಷಿ ಎಂದು ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ ಪ್ರಸಂಗ ಜರುಗಿತು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪಿ ಎಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಇತ್ತೀಚಿಗೆ ನಡೆದ 57 ಕೊಲೆ ಪ್ರಕರಣಗಳ ಪೈಕಿ 56 ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳನ್ನು ಬಂಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಿದರು.
ಈ ಹಿಂದೆ 2011ರಿಂದ 2013ರವರೆಗೆ ಎರಡು ವರ್ಷ ನಾಲ್ಕು ತಿಂಗಳು ಬಿಜೆಪಿಯ ಆರ್.ಅಶೋಕ್ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಬರೋಬ್ಬರಿ 4121 ಕೊಲೆ ಪ್ರರಕಣಗಳು ನಡೆದಿವೆ. ಅದರಲ್ಲೂ ಅತ್ಯಾಚಾರ ಪ್ರರಕಣಗಳು 1639ರಷ್ಟಿದ್ದು, 234 ಪೆÇೀಕ್ಸೋ ಕಾಯ್ದೆ ಅಡಿಯೂ ಮೊಕದ್ದಮೆ ದಾಖಲಾಗಿವೆ. ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿಯೂ 2254 ಕೊಲೆಗಳು, 915ರಷ್ಟು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ ಎಂಬ ಮಾಹಿತಿ ನೀಡಿದರು.
ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ
ಅದೇ ರೀತಿ, ಕಳೆದ ಅವಗೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಆಡಳಿತ ವೇಳೆಯೂ 2417 ಕೊಲೆಗಳು, 949 ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಇನ್ನೂ, ಕಾಂಗ್ರೆಸ್ ಸರ್ಕಾರ ಆಡಳಿತದ ಆರಂಭದಿಂದ ಇದುವರೆಗೂ 616 ಕೊಲೆಗಳು, 310 ಅತ್ಯಾಚಾರ ಪ್ರಕರಣಗಳು ಮಾತ್ರ ವರದಿಯಾಗಿದೆ ಎಂದು ಅವರು ತಿಳಿಸಿದರು.
ಯಾವುದೇ ಅಂಕಿ-ಅಂಶಗಳು ಇಲ್ಲದೆ ನಮ್ಮ ಸರ್ಕಾರದ ವಿರುದ್ಧ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಅಲ್ಲದೆ, ಕೋಮು ಗಲಭೆಗಳು ನಿಯಂತ್ರಣದಲ್ಲಿವೆ. ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ಕೋಲಾರ, ಉಪ್ಪಿನ ಅಂಗಡಿ, ನರಗುಂದ, ಹಿಜಾಬ್ ಕಡೆ ಗಲಾಟೆ, ಶಿವಮೊಗ್ಗದಲ್ಲಿ ಸಾರ್ವಕರ್ ಫೋಟೋ , ಹೀಗೆ ಸಣ್ಣ ಸಣ್ಣ ವಿಚಾರಗಳಿಗೂ ಗಲಭೆ ನಡೆಸಲಾಗುತ್ತಿತ್ತು ಎಂದು ಪರಮೇಶ್ವರ್ ಹೇಳಿದರು.