ಬೆಂಗಳೂರು, ಡಿ.14- ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಿಕೊಂಡು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಲೆಕ್ಕಿಸದೆ ಸಾರ್ವಜನಿಕರನ್ನು ವಂಚಿಸಿ, ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ಹತ್ತು ಲಕ್ಷ ಮೌಲ್ಯದ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್.ಎಂ. ಟ್ರೇಡರ್ಸ್ ಅಂಗಡಿಯಲ್ಲಿ ಅವ ಮೀರಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮ ವಾಗಿ ಸಂಗ್ರಹಿಸಿಕೊಂಡು ಆ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಅಂಗಡಿ ಮೇಲೆ ದಾಳಿ ಮಾಡಿ ಒಬ್ಬನನ್ನು ವಶಕ್ಕೆ ಪಡೆದು 10ಲಕ್ಷ ಮೌಲ್ಯದ ಅವಧಿ ಮೀರಿದ ಜಾಕೂಲೇಟ್ಗಳು, ಸಿಹಿ ಪದಾರ್ಥಗಳು, ತಂಪು ಪಾನೀಯಗಳು ಹಾಗೂ ಇತರೆ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ
ಆರೋಪಿಯು ಪ್ರತಿಷ್ಠಿತ ಕಂಪೆನಿಗಳಿಂದ ಅವ ಮೀರಿದ ಪದಾರ್ಥಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿಕೊಂಡು ಆ ಪದಾರ್ಥಗಳ ಮೇಲಿನ ದಿನಾಂಕದ ಅವ ಮತ್ತು ದರ ಪಟ್ಟಿಯ ಲೇಬಲ್ ಗಳ ನ್ನು ತೆಗೆದುಹಾಕಿ, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಈ ಸಂಬಂಧ ಆರೋಪಿಯ ವಿರುದ್ದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿ, ಆಹಾರ ಸುರಕ್ಷತಾ ಅಧಿಕಾರಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಕೈಗೊಂಡಿರುತ್ತಾರೆ.