ಬೆಳಗಾವಿ,ಡಿ.14- ಬೆಂಗಳೂರು ಅಭಿವೃದ್ಧಿ ಪ್ರಾಕಾರ(ಬಿಡಿಎ)ದಲ್ಲಿರುವ ಆಸ್ತಿಗಳ ರಕ್ಷಣೆಗಾಗಿ ಪ್ರತ್ಯೇಕ ಕೋಶವನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪರಿಷತ್ನಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಡಿಎ ವ್ಯಾಪ್ತಿಯಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ಸ್ವತ್ತುಗಳಿವೆ. ಇವುಗಳನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಸವಾಲೇ ಸರಿ. ಹೀಗಾಗಿ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದೆ ಎಂದರು.
ಬಿಡಿಎ ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ತಮಗೆ ನ್ಯಾಯಾಲಯದಲ್ಲಿ ಸಾಕಷ್ಟು ಹಿನ್ನಡೆಯಾಗುತ್ತಿತ್ತು. ನಮ್ಮ ವಕೀಲರು ಸಮರ್ಥವಾಗಿ ವಾದ ಮಾಡಿದರೂ ತೀರ್ಪುಗಳು ಮಾತ್ರ ಖಾಸಗಿಯವರ ಪರವಾಗಿಯೇ ಬರುತ್ತಿದ್ದವು. ಹೀಗಾಗಿ ಇತ್ತೀಚೆಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಸಭೆ ನಡೆಸಿದ್ದರು.
ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ
ಈ ಸಭೆಗೆ ಬಿಡಿಎ ಹಾಗು ಬಿಬಿಎಂಪಿ ಪ್ರತಿನಿಸುವ ವಕೀಲರುಗಳನ್ನು ಕರೆಸಲಾಗಿತ್ತು. ಇನ್ನು ಮುಂದೆ ನ್ಯಾಯಾಲಯಗಳಲ್ಲಿ ನಮಗೆ ಹಿನ್ನಡೆಯಾಗದಂತೆ ಸಮರ್ಪಕವಾದ ಮಂಡಿಸಿ ಕಾನೂನು ಹೋರಾಟ ಮಾಡಬೇಕೆಂದು ಸೂಚನೆ ಕೊಡಲಾಗಿದೆ. ಏಕಾಏಕಿ ವಕೀಲರನ್ನು ಬದಲಾವಣೆ ಮಾಡಿದರೆ ಹೊಸ ವಕೀಲರಿಗೆ ಹಿಂದಿನ ಮಾಹಿತಿ ಇರುವುದಿಲ್ಲ. ಒಟ್ಟಿನಲ್ಲಿ ಬಿಡಿಎ ಸ್ವತ್ತುಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಸಮರ್ಥವಾಗಿದೆ ಎಂದರು.
ಇದಕ್ಕೂ ಮುನ್ನ ಮರಿತಿಬ್ಬೇಗೌಡ ಅವರು ವಿಷಯ ಪ್ರಸ್ತಾಪಿಸಿ ಬಿಡಿಎ ಪ್ರಕರಣದಲ್ಲಿ ನಮಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಕೇವಲ 3 ತಿಂಗಳಲ್ಲೇ ಒಬ್ಬರೇ ನ್ಯಾಯಾೀಶರು, ಅದೇ ವಕೀಲರು ವಾದ ಮಾಡಿದರೂ ತೀರ್ಪು ಮಾತ್ರ ಖಾಸಗಿಯವರ ಪರ ಬಂದಿದೆ. ಈ ಭೂಮಾಫಿಯಾವನ್ನು ಬಗ್ಗು ಬಡಿಯದಿದ್ದರೆ ಬಿಡಿಎ ಉಳಿಯುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್, ಇನ್ನು ಮುಂದೆ ಈ ರೀತಿಯಾಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.