Thursday, April 30, 2026
Homeಜಿಲ್ಲಾ ಸುದ್ದಿಗಳುಶಿವಮೊಗ್ಗ : ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga: Life imprisonment for two criminals who killed a man by setting him on fire

ಶಿವಮೊಗ್ಗ,ಮಾ.18- ಪೆಟ್ರೋಲ್‌ ಎರಚಿ, ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕುಮಾರ್‌ (57) ಹಾಗೂ ಕಾರ್ತಿಕ್‌ (28) ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳು. ಇವರು ಮಹೇಶಪ್ಪ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ್ದರು.

ಜಮೀನಿನ ವಿಚಾರವಾಗಿ ಈ ಹಿಂದೆ ಇವರ ಮಧ್ಯೆ ಗಲಾಟೆ ನಡೆದಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಕಳೆದ 3-12-2023ರಂದು ಹನಸವಾಡಿ ಸರ್ಕಲ್‌ ಬಳಿ ಕುಮಾರ್‌ ಹಾಗೂ ಕಾರ್ತಿಕ್‌ ಹೊಂಚು ಹಾಕಿ ಕುಳಿತಿದ್ದರು. ಈ ವೇಳೆ ಸ್ಕೂಟಿಯಲ್ಲಿ ಬರುತ್ತಿದ್ದ ಮಹೇಶಪ್ಪ ಅವರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದರು.

ಕೊಲೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ್ದ ಆಗಿನ ಇನ್ಸ್ ಪೆಕ್ಟರ್‌ ಸತ್ಯನಾರಾಯಣ ಇಬ್ಬರನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣ ವಿಚಾರಣೆ ನಡೆಸಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್‌‍ ಅವರು ವಾದ ಮಂಡಿಸಿದ್ದರು. ವಿಚಾರಣೆಯ ವೇಳೆ ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಅಭಯ್‌ ಧನಪಾಲ್‌ ಚೌಗಲ ಅವರು ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 57,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

RELATED ARTICLES

Latest News