Homeಬೆಂಗಳೂರುಆಟೋದಲ್ಲಿ ಬಂದು ಯುವಕನ ಕಗ್ಗೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

ಆಟೋದಲ್ಲಿ ಬಂದು ಯುವಕನ ಕಗ್ಗೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

young man Murder In bengaluru

ಬೆಂಗಳೂರು, ಮಾ.22- ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಆರ್‌ ಪುರಂ ನಿವಾಸಿ ಕಿರಣ್‌ (27) ಭೀಕರವಾಗಿ ಕೊಲೆಯಾದ ಯುವಕ. ಇಂದು ಮುಂಜಾನೆ 4.30ರ ಸಂದರ್ಭದಲ್ಲಿ ಕಲ್ಕೆರೆ ಮುಖ್ಯರಸ್ತೆಯ ಬೋವಿ ಕಾಲೋನಿ ಬಳಿ ಹೋಗುತ್ತಿದ್ದ ಕಿರಣ್‌ನನ್ನು ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.

ನಂತರ ಅವರುಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಆ ವೇಳೆ ದುಷ್ಕರ್ಮಿಗಳು ಕಿರಣ್‌ ಮೇಲೆ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದಿದ್ದಾರೆ. ತೀವ್ರ ಹಲ್ಲೆಯಿಂದ ಕುಸಿದು ಬಿದ್ದ ಮೇಲೆಯೂ ಆತನ ಮೇಲೆ ಮನಬಂದಂತೆ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಕಿರಣ್‌ ಮೇಲೆ ಕೆಆರ್‌ ಪುರ ಸೇರಿದಂತೆ ಹಲವು ಪೊಲೀಸ್‌‍ ಠಾಣೆಗಳಲ್ಲಿ ಎರಡು-ಮೂರು ಅಪರಾಧ ಪ್ರಕರಣಗಳು ದಾಖಲಾಗಿವೆ. ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾಮಮೂರ್ತಿನಗರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News