ಕರಾಚಿ(ಪಾಕಿಸ್ತಾನ),ಡಿ.18- ವಿಷಪ್ರಾಸನಕ್ಕೆ ತುತ್ತಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಮುಂಬೈ ಬಾಂಬ್ ಸ್ಪೋಟದ ಸೂತ್ರದಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು,ಕರಾಚಿಯ ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.
ಪ್ರಸ್ತುತ ದಾವುದ್ ನನ್ನು ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕೈ ಕೊಡುತ್ತಿದೆ. ಈ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದರೂ, ಅಲ್ಲಿನ ಸರ್ಕಾರ ಈ ವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡಿಗಡೆ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದ.ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಉ.ಕೊರಿಯಾ
ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಆದರೂ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ.
ಆಸ್ಪತ್ರೆಯ ಉನ್ನತ ಅಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಮುಂಬೈ ಪೊಲೀಸರು ಪಾತಕಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಯು ಪ್ರಯತ್ನಿಸುತ್ತಿದ್ದಾರೆ.
ಈ ವರ್ಷದ ಜನವರಿ ತಿಂಗಳಲ್ಲಿ ದಾವೂದ್ ಸಹೋದರಿ ಹಸೀನಾ ಪಾರ್ಕರ್ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹೇಳಿಕೆ ನೀಡಿದ್ದು, ಇಬ್ರಾಹಿಂ 2ನೇ ಮದುವೆಯಾಗಿ ಕರಾಚಿಯಲ್ಲೇ ನೆಲೆಸಿರುವುದಾಗಿ ತಿಳಿಸಿದ್ದ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕ್ ಭದ್ರತಾ ಪಡೆಗಳ ನೆರಳಿನಲ್ಲಿ ಆಶ್ರಯ ಪಡೆದಿದ್ದಾನೆ ಎನ್ನಲಾಗಿದೆ. ದಾವೂದ್ ಇಬ್ರಾಹಿಂ ಆಸ್ಪತ್ರೆಯ ಮಹಡಿಯಲ್ಲಿ ಏಕೈಕ ನಿವಾಸಿಯಾಗಿದ್ದು, ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಆತನ ಹತ್ತಿರದ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ.
ಉಗ್ರರು ಅಪಹರಿಸಿದ್ದ ಯುವಕರ ರಕ್ಷಣೆ
ಮುಂಬೈನಲ್ಲಿ 1993ರಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿತ್ತು. ಈ ಸ್ಪೋಟದಲ್ಲಿ 250 ಕ್ಕೂ ಹೆಚ್ಚು ಅಮಾಯಕ ನಾಗರಿಕರು ಮೃತಪಟ್ಟು, 750ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಭೀಕರ ಮುಂಬೈ ಸ್ಪೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಆಗಿದ್ದಾನೆ. ಅಲ್ಲಿಂದ ಆತ ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಎನಿಸಿಕೊಂಡಿದ್ದಾನೆ.